ಬುಧವಾರ, ಮೇ 25, 2022
29 °C

ಚುನಾವಣೆ ಸಮೀಪಿಸಿದೆ, ಮನೆಯಿಂದ ಹೊರಗೆ ಬನ್ನಿ: ಪ್ರಿಯಾಂಕಾ ವಿರುದ್ಧ ಶಾ ಹೇಳಿಕೆ

ಸಂಜಯ್ ಪಾಂಡೆ Updated:

ಅಕ್ಷರ ಗಾತ್ರ : | |

ಲಖನೌ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು 'ಬೆಹೆನ್ ಜೀ' ಎಂದು ಸಂಬೋಧಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಚುನಾವಣೆ ಸಮೀಪಿಸಿದೆ, ಮನೆಯಿಂದ ಹೊರಗೆ ಬನ್ನಿ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಗುರುವಾರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಖಿಲೇಶ್ ಯಾವದ್, ಮಾಯಾವತಿ ಹಾಗೂ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: 

ಪ್ರಿಯಾಂಕಾ ಗಾಂಧಿ ಅವರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಬೆಹೆನ್ ಜೀಗೆ ನೆಗಡಿ ಆದಂತಿದೆ...ಚುನಾವಣೆ ಸಮೀಪಿಸಿದೆ...ಮನೆಯಿಂದ ಹೊರಗೆ ಬನ್ನಿ' ಎಂದು ಹೇಳಿದ್ದಾರೆ.

'ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿದವರು ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ನೀವು ಅಂದುಕೊಂಡಿದ್ದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮತ ನೀಡಿ' ಎಂದು ಮನವಿ ಮಾಡಿದರು.

'ಹಿಂದಿನ ಸರ್ಕಾರಗಳು ಅಧಿಕಾರದಲ್ಲಿದ್ದಾಗ ದೇಶದಲ್ಲಿ ಭಯೋತ್ಪಾದನಾ ದಾಳಿ ನಡೆದಾಗ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಧೈರ್ಯ ಮಾಡಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಪರಿಸ್ಥಿತಿ ಬದಲಾಯಿತು. ಉರಿ ಹಾಗೂ ಪುಲ್ವಾಮಾ ದಾಳಿಯ ಬಳಿಕ ನಾವು ಪಾಕ್‌ಗೆ ನುಗ್ಗಿ ದಾಳಿ ನಡೆಸಿದೆವು' ಎಂದು ಹೇಳಿದರು.

'ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಖಿಲೇಶ್, ಮಾಯಾವತಿ ಮತ್ತು ಪ್ರಿಯಾಂಕಾ ಕೈಜೋಡಿಸಿಕೊಂಡರೂ ಬಿಜೆಪಿ ಗೆಲುವು ದಾಖಲಿಸಲಿದೆ. ಮೂರು ಪಕ್ಷಗಳು ಮೈತ್ರಿ ಮಾಡಿಕೊಂಡರೂ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ' ಎಂದು ಸವಾಲು ಹಾಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು