ಗುರುವಾರ , ಡಿಸೆಂಬರ್ 2, 2021
20 °C

ಉತ್ತರ ಪ್ರದೇಶ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ, 4 ಮಕ್ಕಳು ಸೇರಿ 11 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ಕು ಮಕ್ಕಳು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿರುವ ದುರ್ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾರಿಯಲ್ಲಿ ಅಡ್ಡ ಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ತುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಚಿರ್ಗಾಂವ್ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ಧಾರೆ.

ಮಧ್ಯಪ್ರದೇಶದ ಪಾಂಡೋಖರ್‌ನ ಸುಮಾರು 30 ಜನರು ಟ್ರ್ಯಾಕ್ಟರ್‌ನಲ್ಲಿ ಎರಾಚ್‌ನ ದೇವಸ್ಥಾನಕ್ಕೆ ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಿವಹರಿ ಮೀನಾ ತಿಳಿಸಿದ್ಧಾರೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದ ಪ್ರಾಣಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನದ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ-ಟ್ರಾಲಿ ಪಲ್ಟಿಯಾಗಿದೆ ಎಂದು ಹೇಳಿದ್ದಾರೆ.

ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಏಳು ಮಹಿಳೆಯರು ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಪುಷ್ಪ ದೇವಿ (40), ಮುನ್ನಿ ದೇವಿ (40), ಸುನಿತಾ ಬಾಯಿ (35), ಪೂಜಾ ದೇವಿ (25), ರಜ್ಜೋ ಬಾಯಿ (45), ಪ್ರೇಮಾವತಿ (50), ಕುಸುಮಾ (55), ಕೃಷ್ಣ (10), ಪರಿ (1), ಅನುಷ್ಕಾ (4) ಮತ್ತು ಅವಿ (2) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು