ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾ ಭಾರದ್ವಾಜ್‌ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್‌

ಎಲ್ಗಾರ್‌ ಪರಿಷತ್‌ ಪ್ರಕರಣ:
Last Updated 4 ಆಗಸ್ಟ್ 2021, 10:57 IST
ಅಕ್ಷರ ಗಾತ್ರ

ಮುಂಬೈ: ವಕೀಲೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್‌ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಬಾಂಬೆ ಹೈಕೋರ್ಟ್‌ ಬುಧವಾರ ಕಾಯ್ದಿರಿಸಿತು.

ಸುಧಾ ಭಾರದ್ವಾಜ್‌ ಅವರು ಎಲ್ಗಾರ್‌ ಪರಿಷತ್‌ ಹಾಗೂ ಮಾವೊವಾದಿಗಳ ನಡುವಿನ ನಂಟಿಗೆ ಸಂಬಂಧಿಸಿದ ಪ್ರಕರಣದ ಆರೋಪಿಯಾಗಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ಪರ ಅಡ್ವೋಕೇಟ್‌ ಜನರಲ್‌ ಅಶುತೋಷ್‌ ಕುಂಭಕೋಣಿ, ಎನ್‌ಐಎ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅನಿಲ್‌ ಸಿಂಗ್‌ ಅವರು ವಾದ ಮಂಡಿಸಿ, ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಸುಧಾ ಭಾರದ್ವಾಜ್‌ ಪರ ಹಿರಿಯ ವಕೀಲ ಯುಗ್ ಚೌಧರಿ ವಾದ ಮಂಡಿಸಿದರು.

ಎರಡೂ ಕಡೆಯವರ ವಾದ ಆಲಿಸಿದ, ನ್ಯಾಯಮೂರ್ತಿಗಳಾದ ಎಸ್‌.ಎಸ್.ಶಿಂಧೆ ಹಾಗೂ ಎನ್‌.ಜೆ.ಜಮಾದಾರ್‌ ಅವರು ತೀರ್ಪನ್ನು ಕಾಯ್ದಿರಿಸಿ ಆದೇಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT