ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಗಾರ್ ಪರಿಷತ್ ಪ್ರಕರಣ: ಸ್ಟಾನ್ ಸ್ವಾಮಿ ಜಾಮೀನು ಅರ್ಜಿ ತಿರಸ್ಕಾರ

Last Updated 22 ಮಾರ್ಚ್ 2021, 9:15 IST
ಅಕ್ಷರ ಗಾತ್ರ

ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್‌ಐಎ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.

ವೈದ್ಯಕೀಯ ಕಾರಣಗಳನ್ನು ಆಧರಿಸಿ ಜಾಮೀನು ನೀಡುವಂತೆ ಕೋರಿ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೆಚ್ಚುವರಿ ಸೆಷನ್ ನ್ಯಾಯಾಧೀಶ ಡಿ.ಇ ಕೊಥಲಿಕರ್ ಅವರು ತಿರಸ್ಕರಿಸಿದರು.

ಜೆಸ್ಯೂಟ್ ಪಾದ್ರಿ ಮತ್ತು ಹೋರಾಟಗಾರರಾಗಿದ್ದ ಸ್ಟಾನ್ ಸ್ವಾಮಿಯನ್ನು 2020ರ ಅಕ್ಟೋಬರ್‌ನಲ್ಲಿ ರಾಂಚಿಯಲ್ಲಿ ಬಂಧಿಸಲಾಯಿತು. ನಂತರ ಅವರನ್ನು ನವೀ ಮುಂಬೈನ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಸ್ವಾಮಿ ಪರ ವಕೀಲರು, ಸ್ವಾಮಿ ಅವರು ಪಾರ್ಕಿನ್ಸನ್ ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅವರ ಎರಡೂ ಕಿವಿಗಳು ಕೇಳಿಸುವುದಿಲ್ಲ. ಹೀಗಾಗಿ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT