ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10ಕ್ಕಿಂತ ಅಧಿಕ ನೌಕರರ ಹೊಂದಿದ ಸಂಸ್ಥೆಗಳಲ್ಲಿ ಲೈಂಗಿಕ ಕಿರುಕುಳ: ತನಿಖೆಗೆ ಸಮಿತಿ

ಲೋಕಸಭೆಗೆ ಕೇಂದ್ರ ಸರ್ಕಾರ ಮಾಹಿತಿ
Last Updated 21 ಮಾರ್ಚ್ 2022, 11:36 IST
ಅಕ್ಷರ ಗಾತ್ರ

ನವದೆಹಲಿ: ಹತ್ತು ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿದ ಸಾರ್ವಜನಿಕ ಅಥವಾ ಖಾಸಗಿ ವಲಯದ ಯಾವುದೇ ಕಂಪನಿ ಅಥವಾ ಸಂಸ್ಥೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ಆಂತರಿಕ ಸಮಿತಿಯೊಂದನ್ನು ರಚಿಸಬೇಕು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಸೋಮವಾರದ ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಕೇಂದ್ರ ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು,ಕೆಲಸದ ಅವಧಿ ವೇಳೆ ಮಹಿಳೆಯರಿಗೆ ಸುರಕ್ಷಿತ ಮತ್ತು ಭದ್ರತೆಯ ವಾತಾವರಣ ಕಲ್ಪಿಸುವ ಉದ್ದೇಶದೊಂದಿಗೆ 2013ರ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಪ್ರಕಾರ ಸಾರ್ವಜನಿಕ ಅಥವಾ ಖಾಸಗಿ ವಲಯದಲ್ಲಿ 10 ಅಥವಾ ಅದಕ್ಕಿಂತ ಹೆಚ್ಚು ನೌಕರರನ್ನು ಹೊಂದಿದ ಕಂಪನಿ ಅಥವಾ ಸಂಸ್ಥೆಯು ಲೈಂಗಿಕ ಕಿರುಕುಳದ ದೂರುಗಳ ಸ್ವೀಕಾರ ಮತ್ತು ತನಿಖೆಗೆ ಆಂತರಿಕ ಸಮಿತಿಯೊಂದನ್ನು ರಚಿಸಬೇಕು ಎಂದು ಹೇಳಿದರು.

ಅಲ್ಲದೆ 10ಕ್ಕಿಂತ ಕಡಿಮೆ ನೌಕರರು ಅಥವಾ ಉದ್ಯೋಗದಾತನ ವಿರುದ್ಧವೇ ಕೇಳಿಬರುವ ದೂರುಗಳ ಸ್ವೀಕಾರಕ್ಕೆ ಪ್ರತಿ ಜಿಲ್ಲೆಯಲ್ಲಿ ಸ್ಥಳೀಯ ಸಮಿತಿ ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಇದೇ ವೇಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT