ಶನಿವಾರ, ಅಕ್ಟೋಬರ್ 8, 2022
23 °C

ಯುವಕರಲ್ಲಿ ಉದ್ಯೋಗ ಪ್ರಮಾಣ 5 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ: ವರುಣ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಯುವಕರಲ್ಲಿ ಉದ್ಯೋಗ ಪ್ರಮಾಣವು 5 ವರ್ಷಗಳಲ್ಲಿ ಕನಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ದತ್ತಾಂಶಗಳನ್ನು ಉಲ್ಲೇಖಿಸಿ ಬಿಜೆಪಿ ಸಂಸದ ವರುಣ್‌ ಗಾಂಧಿ ಗುರುವಾರ ಹೇಳಿದ್ದಾರೆ.

ಯುವಕರಲ್ಲಿ ಉದ್ಯೋಗ ಪ್ರಮಾಣವು ಶೇ 20.9ರಿಂದ ಶೇ 10.4ರಷ್ಟಕ್ಕೆ ಕುಸಿದಿದೆ ಎಂದಿರುವ ಅವರು, ಕಷ್ಟಪಡುವ ಯುವಕರು ಎಷ್ಟು ದಿನ ಕಾಯುತ್ತಾರೆ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸರ್ಕಾರದ ಇಲಾಖೆಗಳಿಗೆ ಸೂಚಿಸಿದ್ದಾರೆ, ಆದರೆ ಅವರ‍್ಯಾರೂ ಇದಕ್ಕಾಗಿ ಯಾವುದೇ ಯೋಜನೆಗಳನ್ನು ರೂಪಿಸಿಲ್ಲ ಎಂದಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು