ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಇಬ್ಬರು ನಾಗರಿಕರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದರು.

‘ದಕ್ಷಿಣ ಕಾಶ್ಮೀರ ಜಿಲ್ಲೆಯ ಕಾಕಪೋರಾ ಪ್ರದೇಶದ ದೋಬಿ ಮೊಹಲ್ಲಾದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಮೊದಲು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಯು ದಾಳಿ ನಡೆಸಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ಈ ಗುಂಡಿನ ಕಾಳಗದಲ್ಲಿ ಸಂಬೊರಾ ಪ್ರದೇಶದವರಾದ ಇಶ್ರತ್ ಜಾನ್ ಮತ್ತು ಗುಲಾಂ ನಬಿಗೆ ಗಾಯಗಳಾಗಿವೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸದ್ಯ ಅವರಿಬ್ಬರ ಆರೋಗ್ಯ ಸ್ಥಿರವಾಗಿದೆ’ ಎಂದು ಅವರು ಹೇಳಿದ್ದಾರೆ.

‘ಈಗಲೂ ಗುಂಡಿನ ಚಕಮಕಿ ಮುಂದುವರಿದಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.