ಭಾನುವಾರ, ಆಗಸ್ಟ್ 14, 2022
20 °C

ಭದ್ರತಾ ಪಡೆಗಳ ಕಾರ್ಯಚರಣೆ: ಗಾಯಗೊಂಡ ಸ್ಥಿತಿಯಲ್ಲಿ ಉಗ್ರನ ಸೆರೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಭದ್ರತಾ ಪಡೆಗಳು ನಡೆಸಿದ  ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬನನ್ನು ಗಾಯಗೊಂಡ ಸ್ಥಿತಿಯಲ್ಲಿ ಸೆರೆ ಸಿಕ್ಕಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತನ ಉಗ್ರನನ್ನು ಪುಲ್ವಾಮಾ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾಸ್ ಲೋನ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಯಲ್ಲಿ, ಹೊಟ್ಟೆಗೆ ಗುಂಡು ಹೊಕ್ಕಿದ್ದು, ಆತನನ್ನು ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಅನಂತ್‌ನಾಗ್ ಜಿಲ್ಲೆಯ ಬಾಬಾ ಗುಂಡ್ ಖಲೀಲ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದರು. ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿತು‘ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು