ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಶೋಪಿಯಾನ ಜಿಲ್ಲೆಯ ಡ್ರಾಗಡ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾವಲು ಬೇಲಿಯೊಂದನ್ನು ನಿರ್ಮಿಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದರಿಂದ ಅವರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಯಿತು. ಉಗ್ರರ ಗುರುತು ಮತ್ತು ಅವರ ಗುಂಪಿನ ಬಗ್ಗೆ ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.