ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾ ಬಳಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ

Last Updated 15 ಸೆಪ್ಟೆಂಬರ್ 2020, 5:49 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ.

ಪುಲ್ವಾಮದ ಮಾರ್ವಲಾ ಪ್ರಾಂತ್ಯದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯ ನಡೆಸುವ ವೇಳೆ, ಉಗ್ರರು ಯೋಧರ ಮೇಲೆ ಮೊದಲು ದಾಳಿ ನಡೆಸಿದ್ದಾರೆ. ಸೇನೆಯು ಪ್ರತಿದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಗುಂಡಿನ ದಾಳಿ ಮುಂದುವರಿದಿದ್ದು, ಘಟನೆಯ ಬಗ್ಗೆ ಇನ್ನೂ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT