ಮಂಗಳವಾರ, ಜುಲೈ 27, 2021
25 °C

ಲಸಿಕೆ ಹೆಸರಿನಲ್ಲಿ ರಾಜಕೀಯ ಬೇಡ: ಮಾಯಾವತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ದೇಶದ ಎಲ್ಲಾ ನಾಗರಿಕರಿಗೂ ಲಸಿಕೆ ಲಭ್ಯವಾಗಬೇಕು. ಇದಕ್ಕಾಗಿ ಲಸಿಕೆ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಅಂತ್ಯವಾಗಬೇಕು’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ಆಗ್ರಹಿಸಿದ್ದಾರೆ.

‘ಈಗಾಗಲೇ ಲಸಿಕೆ ವಿಷಯದಲ್ಲಿ ಸಾಕಷ್ಟು ರಾಜಕೀಯ, ವಿವಾದಗಳು ನಡೆದಿವೆ. ಇದರಿಂದ ಜನರು ನೋವು ಅನುಭವಿಸಿದ್ದಾರೆ. ದೇಶದ ಎಲ್ಲಾ ನಾಗರಿಕರು ಲಸಿಕೆಯ ಲಾಭ ಪಡೆಯಬೇಕು. ಇದಕ್ಕಾಗಿ ಲಸಿಕೆ ಹೆಸರಿನಲ್ಲಿ ನಡೆಯುತ್ತಿರುವ ರಾಜಕೀಯ ಅಂತ್ಯವಾಗಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಲಸಿಕೆ ಜತೆಗೆ ವಿಜ್ಞಾನಿಗಳು ಮತ್ತು ತಜ್ಞರಿಗೆ ಸರಿಯಾದ ಸಹಕಾರ, ಬೆಂಬಲ ನೀಡುವುದು ಅವಶ್ಯಕ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರೋಗ್ಯ ಸೌಲಭ್ಯವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು