ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಷನಲ್ ಹೆರಾಲ್ಡ್ ಕಚೇರಿಯಲ್ಲಿ ಇ.ಡಿ ಶೋಧ

Last Updated 2 ಆಗಸ್ಟ್ 2022, 21:00 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಿದ ಒಂದು ವಾರದ ಬಳಿಕ, ಜಾರಿ ನಿರ್ದೇಶನಾಲಯವು (ಇ.ಡಿ) ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್‌ ಕಚೇರಿ ಹಾಗೂ ಇತರ 11 ಸ್ಥಳಗಳಲ್ಲಿ ಮಂಗಳವಾರ ಶೋಧ ನಡೆಸಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನ್ಯಾಷನಲ್ ಹೆರಾಲ್ಡ್ ಹಾಗೂ ಇತರೆ ಸಂಸ್ಥೆಗಳ ಮಧ್ಯೆ ನಡೆದಿರುವ ವ್ಯವಹಾರ ಹಾಗೂ ಹಣ ಅಕ್ರಮ ವರ್ಗಾವಣೆಯ ತನಿಖೆಯ ಭಾಗವಾಗಿ ಶೋಧ ಕಾರ್ಯಾ ಚರಣೆ ನಡೆದಿದೆ. ಪ್ರಕರಣದಲ್ಲಿ ಹೆಚ್ಚು ವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಶೋಧ ನಡೆಸಲಾಗಿದೆ ಎಂದು ಇ.ಡಿ. ಅಧಿಕಾರಿಗಳು ಹೇಳಿದ್ದಾರೆ. ಇದೇ
ಪ್ರಕರಣದಲ್ಲಿ ನಿಗಾ ಇರಿಸಲಾಗಿರುವ ಕೋಲ್ಕತ್ತದ ಶೆಲ್ ಕಂಪನಿಗೆ (ಹಣ ಅಕ್ರಮ ವರ್ಗಾ ವಣೆಗಾಗಿ ಸೃಷ್ಟಿಸಲಾಗಿರುವ ಕಂಪನಿ) ಸೇರಿದ ಜಾಗದಲ್ಲೂ ಶೋಧ ನಡೆದಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಾಲ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಸಿಕ್ಕ ಮಾಹಿತಿ ಆಧರಿಸಿ, ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ವಾರ, ಸೋನಿಯಾ ಅವರನ್ನು
11 ಗಂಟೆ ವಿಚಾರಣೆ ನಡೆಸಲಾಗಿತ್ತು. ಜೂನ್ ತಿಂಗಳಲ್ಲಿ, ರಾಹುಲ್ ಅವರನ್ನು 50 ಗಂಟೆ ವಿಚಾರಣೆಗೆ ಒಳಪಡಿಸಲಾಗಿತ್ತು. ಏಪ್ರಿಲ್‌ನಲ್ಲಿ ಖರ್ಗೆ ಹಾಗೂ ಬನ್ಸಾಲ್ ಅವರನ್ನೂ ವಿಚಾರಣೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT