ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಸೇರಿದ ಹಲವು ಸ್ಥಳಗಳ ಮೇಲೆ ಇ.ಡಿ ದಾಳಿ

Last Updated 17 ಜೂನ್ 2022, 5:29 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಅವರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ರಾಷ್ಟ್ರ ರಾಜಧಾನಿ ಪ್ರದೇಶದ (ಎನ್‌ಸಿಆರ್‌) ಹಲವು ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆಜಾರಿ ನಿರ್ದೇಶನಾಲಯವು ಜೈನ್‌ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯಲ್ಲಿ ಮೇ 30 ರಂದು ಬಂಧಿಸಿತ್ತು. ಸದ್ಯ ಅವರುನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂಲಗಳ ಪ್ರಕಾರ ಇ.ಡಿ ಅಧಿಕಾರಿಗಳು,ಟ್ರಸ್ಟ್‌ ವತಿಯಿಂದ ನಡೆಯುತ್ತಿರುವ ಹೆಸರಾಂತ ಪಬ್ಲಿಕ್‌ ಶಾಲೆಯ ವಿವಿಧ ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ. ಜೈನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರವರ್ತಕರು ಮತ್ತು ನಿರ್ದೇಶಕರನ್ನು ಪ್ರಶ್ನಿಸಲಾಗುತ್ತಿದೆ ಎನ್ನಲಾಗಿದೆ.

ಈ ವಿಚಾರವಾಗಿಇ.ಡಿ ಅಧಿಕಾರಿಗಳು ಇದುವರೆಗೆ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

ಸತ್ಯೇಂದ್ರ ಜೈನ್‌ ಹಾಗೂ ಅವರ ಪತ್ನಿ ಪೂನಂ ಜೈನ್‌ ಸೇರಿದಂತೆ ಇತರರ ವಿರುದ್ಧ, ಭ್ರಷ್ಟಾಚಾರ ತಡೆ ಕಾಯ್ದೆ–1988ರ ಸೆಕ್ಷನ್‌ 13 (2) ಮತ್ತು 13 (1) ಅಡಿಯಲ್ಲಿ ಸಿಬಿಐ 2017ರಲ್ಲಿ ದಾಖಲಿಸಿದ್ದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.

ಸತ್ಯೇಂದ್ರ ಜೈನ್‌, ಅವರ ಪತ್ನಿ ಪೂನಂ ಜೈನ್‌ ಹಾಗೂ ಇತರರ ವಿರುದ್ಧ ಸಿಬಿಐ2018ರ ಡಿಸೆಂಬರ್‌ 3ರಂದು ಚಾರ್ಚ್‌ಶೀಟ್‌ ದಾಖಲಿಸಿತ್ತು.ಸತ್ಯೇಂದ್ರ ಜೈನ್‌ ಅವರು ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ವೇಳೆ 2015ರ ಫೆಬ್ರುವರಿ 14ರಿಂದ 2017ರ ಮೇ 31ರ ಅವಧಿಯಲ್ಲಿ, ಘೋಷಿತ ಆದಾಯ ಮೂಲಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದರು ಎಂದು ಅದರಲ್ಲಿ ಆರೋಪಿಸಲಾಗಿತ್ತು.

ಜೈನ್‌ ಮತ್ತು ಅವರ ಕುಟುಂಬದ ಒಡೆತನದ ಕಂಪೆನಿಗಳಿಗೆ ಸೇರಿದ ₹ 4.81 ಕೋಟಿ ಮೌಲ್ಯದಸ್ಥಿರಾಸ್ತಿಯನ್ನು ಇ.ಡಿ ಮಾರ್ಚ್‌ 31ರಂದು ವಶಕ್ಕೆ ಪಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT