ಶುಕ್ರವಾರ, ಫೆಬ್ರವರಿ 26, 2021
31 °C

ವಂಚನೆ ಪ್ರಕರಣ: ಶಾಸಕನಿಗೆ ಸೇರಿದ ತಾಣಗಳ ಮೇಲೆ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಿಎಂಸಿ ಬ್ಯಾಂಕ್ ₹ 4,300 ಕೋಟಿ ವಂಚನೆ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರ ಶಾಸಕ ಹಿತೇಂದ್ರ ಠಾಕೂರ್ ಅವರಿಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದ್ದಾರೆ.

ಮುಂಬೈಗೆ ಹೊಂದಿಕೊಂಡಿರುವ ಪಾಲ್ಗರ್ ಜಿಲ್ಲೆಯಲ್ಲಿನ ವಸೈ ವಿರಾರ್ ಪ್ರದೇಶದಲ್ಲಿ, ಬಹುಜನ ವಿಕಾಸ್‌ ಅಘಡಿ (ಬಿವಿಎ) ಪಕ್ಷದ ಮುಖ್ಯಸ್ಥರೂ ಆಗಿರುವ ಶಾಸಕ ಹಿತೇಂದ್ರ ಠಾಕೂರ್ ಪ್ರವರ್ತಕರಾಗಿರುವ ವಿವಾ ಗ್ರೂಪ್‌ಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಚ್‌ಡಿಐಎಲ್ ಕಂಪನಿಯ ಹಣದ ವಹಿವಾಟು ಮತ್ತು ವಿವಾ ಸಮೂಹಕ್ಕೆ ಸೇರಿದ ಇತರೆ ಕೆಲವರ ವಹಿವಾಟಿನ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು