ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವೂದ್ ಇಬ್ರಾಹಿಂಗೆ ಸಂಬಂಧಿತ ತಾಣಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ

Last Updated 15 ಫೆಬ್ರುವರಿ 2022, 7:20 IST
ಅಕ್ಷರ ಗಾತ್ರ

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿರುವ ಮುಂಬೈನ ವಿವಿಧ ತಾಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.

ದಾವೂದ್ ಸಹೋದರಿ ಹಸೀನಾ ಪಾರ್ಕರ್ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮತ್ತೊಂದೆಡೆ, ವಿವಿಧ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡಿರುವ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಮನೆಯಲ್ಲೂ ಶೋಧ ನಡೆದಿದೆ.

ಮುಂಬೈನ ಸುಮಾರು 10 ತಾಣಗಳಲ್ಲಿ ಇಡಿ ಅಧಿಕಾರಿಗಳು ಬೆಳಗ್ಗಿನಿಂದಲೇ ಶೋಧ ಕಾರ್ಯ ನಡೆಸಿದ್ದಾರೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ಸಂಬಂಧ ಶೋಧ ನಡೆದಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನಂಟು ಹೊಂದಿರುವ ರಾಜಕಾರಣಿ ಒಬ್ಬರ ಮನೆಯಲ್ಲೂ ಶೋಧ ನಡೆದಿದೆ ಎಂದು ಮೂಲಗಳು ‘ಪಿಟಿಐ‘ಗೆ ತಿಳಿಸಿವೆ.

ದಾವೂದ್ ಇಬ್ರಾಹಿಂ ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಅಪರಾಧಿಗಳ ಪಟ್ಟಿಯಲ್ಲಿದ್ದು, ದಶಕಗಳಿಂದ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂಬ ವರದಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT