ಶನಿವಾರ, ಜೂನ್ 25, 2022
24 °C

ಚೀನಾ ಮೂಲದ ಶಿಯೋಮಿ ಕಂಪನಿಯ ₹5,551 ಕೋಟಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಹಾಗೂ ಕಾನೂನುಬಾಹಿರ ಹಣ ವರ್ಗಾವಣೆಯಲ್ಲಿ ತೊಡಗಿದ ಆರೋಪದಡಿ ಜಾರಿ ನಿರ್ದೇಶನಾಲಯವು (ಇ.ಡಿ) ಚೀನಾ ಮೂಲದ ಶಿಯೋಮಿ ಇಂಡಿಯಾ ಕಂಪನಿಯ ಸುಮಾರು ₹5,551 ಕೋಟಿ ಹಣವನ್ನು ಜಪ್ತಿ ಮಾಡಿದೆ.

ಶನಿವಾರ ದೆಹಲಿ ಸೇರಿದಂತೆ ಶಿಯೋಮಿ ಕಂಪನಿಯ ವಿವಿಧ ಬ್ಯಾಂಕಿಂಗ್ ವಹಿವಾಟುಗಳನ್ನು ಪರಿಶೀಲನೆ ನಡೆಸಿ ಇ.ಡಿ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಿಯೋಮಿ ಭಾರತದಲ್ಲಿ ಮೊಬೈಲ್, ಸ್ಮಾರ್ಟ್‌ ಫೋನ್‌ ಸೇರಿದಂತೆ ವಿವಿಧ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಬಿಡಿ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿದೆ.

ವಿದೇಶಿ ವಿನಿಯಮ ನಿಯಂತ್ರಣ ಕಾಯ್ದೆ 1999 ಅಡಿ ಈ ಜಪ್ತಿ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ. ಶಿಯೋಮಿ ಜೊತೆ ಸಂಪರ್ಕ ಹೊಂದಿರುವ ವಿದೇಶದ ಮೂರು ಕಂಪನಿಗಳಿಗೆ ಶಿಯೋಮಿ ಇಂಡಿಯಾ ಭಾರೀ ಪ್ರಮಾಣದಲ್ಲಿ ಹಣ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಇ.ಡಿ ಕಳೆದ ಫೆಬ್ರವರಿಯಲ್ಲಿ ವಿಚಾರಣೆ ಆರಂಭಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು