ಭಾನುವಾರ, ಜೂನ್ 26, 2022
25 °C

ನವಾಬ್ ಮಲಿಕ್ ಪತ್ನಿ ಮತ್ತು ಮಕ್ಕಳಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಸಚಿವ ಮತ್ತು ಎನ್‌ಸಿ‍ಇ ನಾಯಕ ನವಾಬ್ ಮಲಿಕ್ ಅವರ ಪತ್ನಿ ಮತ್ತು ಇಬ್ಬರು ಪುತ್ರರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

ಆದರೆ ವಿಚಾರಣೆಗೆ ಯಾರೊಬ್ಬರೂ ಹಾಜರಾಗಿಲ್ಲ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಬುಧವಾರ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ನವಾಬ್ ಮಲಿಕ್ ಪತ್ನಿ ಮೆಹ್‌ಜಾಬಿನ್ ಅವರಿಗೆ ಎರಡು ಬಾರಿ ಮತ್ತು ಮಗ ಫರಾಜ್ ಮಲಿಕ್ ಅವರಿಗೆ ಐದು ಬಾರಿ ಸಮನ್ಸ್ ನೀಡಲಾಗಿದೆ. ಆದರೆ ಅವರು ಈವರೆಗೆ ವಿಚಾರಣೆಗೆ ಹಾಜರಾಗಿಲ್ಲ ಎಂದು ಉಲ್ಲೇಖಿಸಲಾಗಿದೆ.

ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ಅವರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಜತೆ ನಂಟು ಇದೆ ಎನ್ನುವುದನ್ನು ಇಡಿ ಅಧಿಕಾರಿಗಳು ಮಂಗಳವಾರ ಬಹಿರಂಗಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು