ಶಿವಸೇನಾ ನಾಯಕ ಯಶವಂತ್ ಜಾಧವ್‌ಗೆ ಇ.ಡಿ. ಸಮನ್ಸ್
ಮುಂಬೈ: ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಸೇನಾ ನಾಯಕ ಯಶವಂತ್ ಜಾಧವ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಸಮನ್ಸ್ ನೀಡಿದೆ.
ಈ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
Enforcement Directorate summons Shiv Sena leader Yashwant Jadhav for questioning in connection with alleged violation of FEMA (Foreign Exchange Management Act) rules, the economic intelligence agency said
(File pic) pic.twitter.com/uKgjtbtY3y
— ANI (@ANI) May 25, 2022
ಈ ಮಧ್ಯೆ, ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವಾಬ್ ಮಲಿಕ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ವರದಿಯಾಗಿದೆ.
ಬಿಜೆಪಿ ಆಡಳಿತದಲ್ಲಿ ಹಿಟ್ಲರ್ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ: ಮಮತಾ ಬ್ಯಾನರ್ಜಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.