ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಷನಲ್‌ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್‌ ಗಾಂಧಿಗೆ ಇ.ಡಿ ಸಮನ್ಸ್‌

ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಸಮನ್ಸ್‌ ಜಾರಿ ಮಾಡಿದೆ.

'ರಾಜಕೀಯ ವಿರೋಧಿಗಳಲ್ಲಿ ಭಯ ಹುಟ್ಟಿಸಲು ತನಿಖಾ ಸಂಸ್ಥೆಗಳನ್ನು ಬಿಜೆಪಿಯು ಕೈಗೊಂಬೆಗಳ ರೀತಿ ಬಳಸಿಕೊಳ್ಳುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ಗೆ ಸಂಬಂಧಿಸಿದ ಇತಿಹಾಸವು ಸ್ವಾತಂತ್ರ್ಯ ಹೋರಾಟದ ದಿನಗಳದ್ದು,.. ' ಎಂದು ಕಾಂಗ್ರೆಸ್‌ ಮುಖಂಡ ಮತ್ತು ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ.

ಜೂನ್‌ 8ರಂದು ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಹೋಗುವುದಾಗಿ ತಿಳಿಸಿದ್ದಾರೆ.

'ಜಾರಿ ನಿರ್ದೇಶನಾಲಯವು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು 2015ರಲ್ಲೇ ಮುಕ್ತಾಯಗೊಳಿಸಿದೆ. ಆದರೆ, ಸರ್ಕಾರಕ್ಕೆ ಅದನ್ನು ಸಹಿಸಲಾರದೆ, ಸಂಬಂಧಿಸಿದ ಇ.ಡಿ ಅಧಿಕಾರಗಳನ್ನು ತೆಗೆದುಹಾಕಿದೆ. ಹೊಸ ಅಧಿಕಾರಿಗಳನ್ನು ನಿಯೋಜಿಸಿ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಿದೆ. ಹಣದುಬ್ಬರ ಮತ್ತು ಇತರೆ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಮಾಡಲಾಗಿದೆ' ಎಂದು ಸಿಂಘ್ವಿ ಆರೋಪಿಸಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ನ್ಯಾಷನಲ್‌ ಹೆರಾಲ್ಡ್‌ ಹಗರಣವು ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿ ಆಸ್ತಿಯ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ್ದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT