ಸೋಮವಾರ, ಮಾರ್ಚ್ 20, 2023
30 °C
ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿರುವವರಿಗೆ ಕೋವಿಡ್ ಪರೀಕ್ಷೆ; ಖಚಿತಪಡಿಸಿಕೊಳ್ಳಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗಿರುವವರಿಗೆ ಕೊರೊನಾ ಸೋಂಕು ಪತ್ತೆಗೆ ಪರೀಕ್ಷೆ ನಡೆಸಲಾಗಿದೆಯೇ ಹಾಗೂ ಅವರಿಗೆ ಕೋವಿಡ್‌ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿರುವ ರೋಗಿಗಳನ್ನು ಭಿಕ್ಷುಕರ ಕೇಂದ್ರಗಳಿಗೆ ಸ್ಥಳಾಂತರಿಸುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ‌ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ. ಆರ್. ಷಾ ಅವರನ್ನೊಳಗೊಂಡ ನ್ಯಾಯಪೀಠ, ‘ಮಾನಸಿಕ ಆರೋಗ್ಯ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿರುವ ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

ಇದೇ ವೇಳೆ ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗಿರುವವರಿಗೆ ಕೋವಿಡ್‌ ಪರೀಕ್ಷೆ ನಡೆಸುವುದು ಮತ್ತು ಕೋವಿಡ್‌ ಲಸಿಕೆ ನೀಡಿರುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ನಿರ್ದೇಶನ ನೀಡಿದೆ.

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿರುವವರ ಆರೋಗ್ಯ ರಕ್ಷಣೆ ಮತ್ತು ಲಸಿಕೆ ನೀಡುವ ವಿಷಯದಲ್ಲಿ ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಸಹಕಾರ ನೀಡುವ ಜತೆಗೆ, ಜುಲೈ 12 ರಂದು ನಡೆಯಲಿರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಭೆಯಲ್ಲಿ ಭಾಗವಹಿಸುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು