ಬುಧವಾರ, ಅಕ್ಟೋಬರ್ 21, 2020
21 °C

ಭತ್ತಕ್ಕೆ ನ್ಯಾಯಯುತ ಬೆಲೆ ನೀಡಲು ಪ್ರಿಯಾಂಕಾ ಗಾಂಧಿ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಉತ್ತರಪ್ರದೇಶ ಸರ್ಕಾರರ ಭತ್ತದ ಬೆಳೆಗೆ ಸೂಕ್ತ ಖರೀದಿ ದರವನ್ನು ನಿಗದಿಪಡಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿಭಟನೆ ಕೈಗೊಳ್ಳಲಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ ಉಸ್ತುವಾರಿಯೂ ಆಗಿರುವ ಅವರು, ‘ಭತ್ತದ ಖರೀದಿ ಪ್ರಮಾಣ ರಾಜ್ಯದಲ್ಲಿ ತೀವ್ರವಾಗಿ ಕುಸಿದಿದೆ. ರೈತರು ಆತಂಕದಲ್ಲಿಇದ್ದಾರೆ’ ಎಂದು ಟ್ವೀಟ್‌ನಲ್ಲಿ  ಟೀಕಿಸಿದರು.

ಅಲ್ಪಪ್ರಮಾಣದಲ್ಲಿ ಖರೀದಿ ಪ್ರಕ್ರಿಯೆ ನಡೆದಿದೆ. ಖರೀದಿ ದರವೂ ಕಡಿಮೆ ಇದೆ. ಇಂಥ ಸ್ಥಿತಿಯಲ್ಲಿ ತೇವಾಂಶದ ಹೆಸರಿನಲ್ಲಿ ರೈತರನ್ನು ಶೋಷಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗೋಧಿಗಿಂತಲೂ ಭತ್ತದ ದರ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಉತ್ತರ ಪ್ರದೇಶ ಸರ್ಕಾರ ತಕ್ಷಣೇ ಮಧ್ಯಪ್ರವೇಶಿಸಿ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವು ತೀವ್ರ ಹೋರಾಟವನ್ನು ಆರಂಭಿಸಲಿದೆ ಎಂದು ಎಚ್ಚರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು