ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಸೇವಾ ಕೇಂದ್ರ ಸ್ಥಾಪನೆಗೆ ಯುಜಿಸಿ ಸಲಹೆ: ಹೊಸ ಮಾರ್ಗಸೂಚಿ ಇಲ್ಲಿದೆ

ದೇಹಿಕ ಸಾಮರ್ಥ್ಯ ಹೆಚ್ಚಳಕ್ಕೆ ಒತ್ತು * ಕ್ರಿಯಾಶೀಲ ಕ್ಯಾಂಪಸ್‌ ನಿರ್ಮಾಣ ಉದ್ದೇಶ
Last Updated 4 ಮೇ 2022, 10:46 IST
ಅಕ್ಷರ ಗಾತ್ರ

ನವದೆಹಲಿ: ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ ಹೆಚ್ಚಿಸುವ ಸಂಬಂಧ ವಿದ್ಯಾರ್ಥಿಗಳ ಸೇವಾ ಕೇಂದ್ರಗಳ (ಎಸ್‌ಎಸ್‌ಸಿ) ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ನೂತನ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಿದ್ಧಪಡಿಸಿದೆ.

‘ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಉತ್ಸಾಹಭರಿತ, ಕ್ರಿಯಾಶೀಲ ಕ್ಯಾಂಪಸ್‌ಗಳನ್ನು ಹೊಂದಬೇಕು ಎಂಬುದೇ ಈ ನೂತನ ಮಾರ್ಗಸೂಚಿಗಳ ರಚನೆಯ ಉದ್ದೇಶ’ ಎಂದು ಯುಜಿಸಿ ಚೇರಮನ್ ಜಗದೀಶಕುಮಾರ್‌ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಬೇಕು. ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳುವುದು, ಇತರರಿಗೆ ನೆರವು ನೀಡಲು ತಮ್ಮದೇ ಆದ ಗುಂಪು ಕಟ್ಟಿಕೊಳ್ಳುವ ಮೂಲಕ ಅವರ ವ್ಯಕ್ತಿತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಸಾಧಿಸುವುದೇ ಈ ನಡೆಯ ಉದ್ದೇಶ’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಉತ್ತಮವಾಗಿರಬೇಕು. ಆ ಮೂಲಕ ಒತ್ತಡ ಹಾಗೂ ನಡತೆಗೆ ಸಂಬಂಧಿಸಿ ಎದುರಾಗುವ ಸಮಸ್ಯೆಗಳನ್ನು ಅವರು ಸಮರ್ಥವಾಗಿ ಎದುರಿಸುವಂತಾಗಬೇಕು ಎಂಬುದು ಸಹ ಈ ನೂತನ ಮಾರ್ಗಸೂಚಿಗಳ ಉದ್ದೇಶವಾಗಿದೆ’ ಎಂದು ಅವರು ಹೇಳಿದ್ದಾರೆ.

‘ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ, ದೈಹಿಕ ಸಾಮರ್ಥ್ಯ ಹೆಚ್ಚಳಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿವೆ, ಮಾನವ ಸಂಪನ್ಮೂಲ ಇದೆ. ಆದರೆ, ದೈಹಿಕ ಚಟುವಟಿಕೆಗಳು ಕಡ್ಡಾಯ ಇಲ್ಲ. ಈ ನ್ಯೂನತೆಯನ್ನು ಸರಿಪಡಿಸಬೇಕು’ ಎಂದು ಯುಜಿಸಿ ರೂಪಿಸಿರುವ ಈ ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.

ನೂತನ ಮಾರ್ಗಸೂಚಿಯ ಮುಖ್ಯಾಂಶಗಳು

* ಉತ್ತಮ ಬೋಧನಾ–ಕಲಿಕಾ ಪರಿಸರ ನಿರ್ಮಾಣವಾಗಬೇಕು

* ಎಲ್ಲರಿಗೂ ಸಮಾನ ಅವಕಾಶಗಳು ಸಿಗುವಂತಾಗಬೇಕು

* ಸಹಪಠ್ಯ ಚಟುವಟಿಕೆ, ಸಮಾಜಮುಖಿ ಕಾರ್ಯಗಳಿಗೆ ಒತ್ತು

* ತರಬೇತಿ, ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದು

* ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ಮಹಿಳೆ ಉತ್ತೇಜನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT