ಮಂಗಳವಾರ, ಆಗಸ್ಟ್ 16, 2022
20 °C

ದೆಹಲಿ ಏರ್‌ಪೋರ್ಟ್‌ನಲ್ಲಿ ₹29 ಕೋಟಿ ಮೌಲ್ಯದ ಕೊಕೇನ್ ವಶ: ಇಥಿಯೊಪಿಯ ಪ್ರಜೆ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ₹29 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆಗೆ ಯತ್ನಿಸಿದ ಇಥಿಯೊಪಿಯ ಪ್ರಜೆಯನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಅದ್ದಿಸ್ ಅಬಾಬದಿಂದ ಬಂದಿದ್ದ ವ್ಯಕ್ತಿಯನ್ನು ತಡೆದು ತಪಾಸಣೆಗೊಳಪಡಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

ವೈಯಕ್ತಿಕ ಮತ್ತು ಬ್ಯಾಗೇಜ್ ಸರ್ಚ್ ವೇಳೆ ಟ್ರಾಲಿ ಬ್ಯಾಗ್‌ನಲ್ಲಿ 1.9 ಕೆ.ಜಿಯಷ್ಟು ಕೊಕೇನ್ ಪತ್ತೆಯಾಗಿದೆ.

ವಶಕ್ಕೆ ಪಡೆದಿರುವ ಕೊಕೇನ್ ಬೆಲೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹ 29.32 ಕೋಟಿ ಎಂದು ಅಂದಾಜಿಸಲಾಗಿದ್ದು, ಇಥಿಯೊಪಿಯ ಮೂಲದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು