ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ನಿರ್ವಹಣೆ: ಐಎಂಎಫ್ ವರದಿ ಉಲ್ಲೇಖಿಸಿ ರಾಹುಲ್ ಗಾಂಧಿ ಟೀಕೆ

Last Updated 16 ಅಕ್ಟೋಬರ್ 2020, 6:17 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಆರ್ಥಿಕತೆಯು ಈ ವರ್ಷ ಶೇ 10.3ರಷ್ಟು ಕುಸಿಯಬಹುದು ಎಂಬ ಅಂತರ ರಾಷ್ಟ್ರೀಯಹಣಕಾಸು ನಿಧಿಯ (ಐಎಂಎಫ್) ಅಂದಾಜು ಉಲ್ಲೇಖಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇದು ಕೇಂದ್ರದ ಮತ್ತೊಂದು ‘ಅತ್ಯುತ್ತಮ ಸಾಧನೆ’ ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಐಎಂಎಫ್ 2020-21ನೇ ಹಣಕಾಸು ವರ್ಷಕ್ಕೆ ಭಾರತ, ಪಾಕಿಸ್ತಾನ, ಶ್ರೀಲಂಕಾ, ಚೀನಾ, ಬಾಂಗ್ಲಾದೇಶ, ನೇಪಾಳ ಕುರಿತು ಮಾಡಿರುವ ಅಂದಾಜಿನ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಪಾಕಿಸ್ತಾನ ಮತ್ತು ಆಫ್ಗಾನಿಸ್ತಾನ ದೇಶಗಳು ಕೋವಿಡ್ ಪರಿಸ್ಥಿತಿಯನ್ನು ಭಾರತಕ್ಕಿಂತಲೂ ಚೆನ್ನಾಗಿ ನಿಭಾಯಿಸಿವೆ ಎಂದು ಅವರು ಹೇಳಿದ್ದಾರೆ.

ಆದರೆ, ಶೇ 8.8ರಷ್ಟು ಪ್ರಗತಿಯೊಂದಿಗೆ ಭಾರತ ಪುಟಿದೇಳುವ ಸಂಭವವಿದೆ. ಈ ಮೂಲಕ ತ್ವರಿತಗತಿಯಲ್ಲಿ ಬೆಳೆಯುತ್ತಿರುವ ಆರ್ಥಿಕತೆ ಎಂಬ ಹಿರಿಮೆಗೆ ಪಾತ್ರವಾಗಲಿದೆ. ಚೀನಾದ ಪ್ರಗತಿ ದರ ಶೇ 8.2ರಷ್ಟು ಇರುವ ಸಾಧ್ಯತೆ ಇದೆ ಎಂದು ಐಎಂಎಫ್ ಇತ್ತೀಚಿಗೆ ಬಿಡುಗಡೆ ಮಾಡಲಾದ ವರ್ಲ್ಡ್ ಎಕನಾಮಿಕ್ ಔಟ್ ಲುಕ್ ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT