ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ವಾಯು ಗುಣಮಟ್ಟದಲ್ಲಿ ಗಣನೀಯ ಸುಧಾರಣೆ: ಕೇಜ್ರಿವಾಲ್

Last Updated 5 ಫೆಬ್ರುವರಿ 2023, 9:13 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ವಾಯು ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದ್ದು, ಇದನ್ನು ಸಂಸತ್ ಕೂಡ ಅಂಗೀಕರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಇದೇ ವೇಳೆ ವಾಯು ಗುಣಮಟ್ಟದಲ್ಲಿ ಸುಧಾರಣೆಗಾಗಿ ದೆಹಲಿ ಜನತೆಯ ನಿರಂತರ ಪ್ರಯತ್ನವನ್ನು ಅವರು ಪ್ರಶಂಸಿಸಿದ್ದಾರೆ.

ಈ ಕುರಿತು ಟ್ವಿಟರ್ ಮಾಡಿರುವ ಕೇಜ್ರಿವಾಲ್, ಚಿತ್ರವನ್ನು ಹಂಚಿದ್ದಾರೆ.

ಜನವರಿ 31ರಂದು 2022-23ರ ಆರ್ಥಿಕ ಸರ್ವೇ ವರದಿಯನ್ನು ಸಂಸತ್‌‌ ಮುಂದಿಡಲಾಗಿದೆ.

ಧೃಡ ಸಂಕಲ್ಪವನ್ನು ಹೊಂದಿದ್ದರೆ ಎಂತಹ ಕಷ್ಟಕರವಾದ ಕೆಲಸವೂ ಸಾಧ್ಯವಾಗಲಿದೆ. ಭವಿಷ್ಯದಲ್ಲಿ ವಾಯು ಗುಣಮಟ್ಟ ಸುಧಾರಿಸುವತ್ತ ಪ್ರಯತ್ನಿಸಬೇಕಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT