ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಗಣತಿಗೆ ನಾಗರಿಕರು ಉತ್ತರಿಸಲೇಬೇಕು: ಕೇಂದ್ರ ಸರ್ಕಾರ

Last Updated 22 ಮಾರ್ಚ್ 2022, 12:58 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಜನಗಣತಿಯ ಪ್ರಶ್ನೆಗಳಿಗೆ ಉತ್ತರಿಸಲು ಭಾರತೀಯರೆಲ್ಲರೂ ಕಾನೂನಾತ್ಮಕವಾಗಿ ಬದ್ಧರಾಗಿರುತ್ತಾರೆ. ಅಲ್ಲದೆ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್‌ಪಿಆರ್) ಪ್ರಕ್ರಿಯೆಯನ್ನು ಸುಲಲಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಮಂಗಳವಾರದ ಲೋಕಸಭೆ ಕಲಾಪ ವೇಳೆ ಮಾತನಾಡಿದ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು, '1948ರ ಜನಗಣತಿ ಕಾಯ್ದೆ ಪ್ರಕಾರ ರಾಜ್ಯ ಸರ್ಕಾರಗಳು ಜನಗಣತಿ ಅಧಿಕಾರಿಗಳನ್ನು ನೇಮಕ ಮಾಡಬೇಕು ಅಥವಾ ಜನಗಣತಿಯ ಮೇಲ್ವಿಚಾರಣೆ ನಡೆಸಬೇಕು. ಜನಗಣತಿ ಮತ್ತು ಎನ್‌ಪಿಆರ್ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗಿದೆ' ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT