ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ವನ್ಯಜೀವಿ ದಿನ: ಪ್ರಾಣಿಗಳಿಗೆ ಸುರಕ್ಷಿತ ಆವಾಸಸ್ಥಾನ ಕಲ್ಪಿಸಿ -ಪಿಎಂ ಮೋದಿ

Last Updated 3 ಮಾರ್ಚ್ 2021, 6:20 IST
ಅಕ್ಷರ ಗಾತ್ರ

ನವದೆಹಲಿ: ವನ್ಯಜೀವಿ ಮತ್ತು ಅರಣ್ಯ ರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಜನರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಅರಣ್ಯ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸಸ್ಥಾನ ಕಲ್ಪಿಸಿಕೊಡುವಂತಹ ಪ್ರಯತ್ನಗಳು ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.

ಬುಧವಾರ ವಿಶ್ವ ವನ್ಯಜೀವಿ ದಿನದ ಅಂಗವಾಗಿ ಟ್ವೀಟ್‌ ಮಾಡಿರುವ ಮೋದಿ ಅವರು, ‘ವನ್ಯಜೀವಿ ಸಂರಕ್ಷಣೆಗಾಗಿ ಕೆಲಸ ಮಾಡುವ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ‘ ಎಂದು ಉಲ್ಲೇಖಿಸಿದ್ದಾರೆ.

ಸಿಂಹ, ಹುಲಿ ಮತ್ತು ಚಿರತೆಗಳು ಸೇರಿದಂತೆ ಭಾರತದಲ್ಲಿ ಎಲ್ಲ ವನ್ಯಜೀವಿಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದ್ದೇವೆ. ಸಾಧ್ಯವಿರುವಲ್ಲೆಲ್ಲ ಅರಣ್ಯಗಳ ರಕ್ಷಣೆ ಮತ್ತು ಪ್ರಾಣಿಗಳಿಗೆ ಸುರಕ್ಷಿತ ಆವಾಸಸ್ಥಾನಗಳನ್ನು ಕಲ್ಪಿಸುವ ಕೆಲಸ ಮಾಡಬೇಕು‘ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ‘ಬದ್ಧತೆಯೊಂದಿಗೆ ವನ್ಯಜೀವಿಗಳನ್ನು ರಕ್ಷಿಸುವ ಮತ್ತು ಸಂರಕ್ಷಿಸುವ ಕೆಲಸವಾಗಬೇಕು. ಪರಿಸರ ಸಮತೋಲನ ಕಾಪಾಡಿಕೊಳ್ಳುವ ಅಗತ್ಯತೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT