ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಹಲೋತ್-ಪೈಲಟ್ ಗುದ್ದಾಟ; ಎಲ್ಲವೂ ಸುಸೂತ್ರವಾಗಿ ಬಗೆಹರಿಯಲಿದೆ: ವೇಣುಗೋಪಾಲ್‌

Last Updated 16 ಡಿಸೆಂಬರ್ 2022, 10:43 IST
ಅಕ್ಷರ ಗಾತ್ರ

ದೌಸಾ: ‘ರಾಜಸ್ಥಾನದಲ್ಲಿನ ಬಿಕ್ಕಟ್ಟು ಸುಸೂತ್ರವಾಗಿ ಬಗೆಹರಿಯಲಿದೆ. ರಾಜ್ಯದಲ್ಲಿ ಪಕ್ಷ ಒಗ್ಗಟ್ಟಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಶುಕ್ರವಾರ ಹೇಳಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಹಾಗೂ ಯುವ ಮುಖಂಡ ಸಚಿನ್‌ ಪೈಲಟ್‌ ನಡುವೆ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಈ ಕುರಿತು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ಆಶಯ ವ್ಯಕ್ತಪಡಿಸಿದ್ದಾರೆ.

‘ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಮರ್ಥ್ಯ ತೋರಲಿದೆ. ನಮಗೆ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ದೊರೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಾಯಕ ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್‌ ಜೋಡೊ ಯಾತ್ರೆಯು ರಾಜಸ್ಥಾನ ಪ್ರವೇಶಿಸುವ ಮುನ್ನ ಗೆಹಲೋತ್‌ ಹಾಗೂ ಪೈಲಟ್‌ ನಡುವಣ ಭಿನ್ನಮತ ಸ್ಫೋಟಗೊಂಡಿತ್ತು. ವೇಣುಗೋಪಾಲ್‌ ಅವರ ಮಧ್ಯಪ್ರವೇಶದಿಂದಾಗಿ ಇಬ್ಬರ ನಡುವಣ ತಿಕ್ಕಾಟವು ಅಲ್ಪಮಟ್ಟಿಗೆ ಶಮನಗೊಂಡಿತ್ತು. ವೇಣುಗೋ‍ಪಾಲ್‌, ಪೈಲಟ್‌ ಹಾಗೂ ಗೆಹಲೋತ್‌ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಮಾಧ್ಯಮಗಳ ಎದುರು ಒಗ್ಗಟ್ಟು ಪ್ರದರ್ಶಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT