ನವದೆಹಲಿ(ಪಿಟಿಐ): ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಲ್ಯುಎಸ್)ದ ನೀಟ್-ಪಿಜಿ ಪ್ರವೇಶಕ್ಕೆ 8 ಲಕ್ಷ ವಾರ್ಷಿದ ಆದಾಯದ ಮಾನದಂಡಗಳನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಜುಲೈ ತಿಂಗಳಲ್ಲಿ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ಪಿ.ಎಸ್.ನರಸಿಂಹ ಅವರಿದ್ದ ಪೀಠವು, ಈ ವಿಚಾರವನ್ನು ಮೂವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಬೇಕಿದೆ. ಹೀಗಾಗಿ ಬೇಸಿಗೆ ರಜಾ ಅವಧಿಯಲ್ಲಿ ಈ ಅರ್ಜಿ ವಿಚಾರಣೆ ಅಸಾಧ್ಯ. ಬೇಸಿಗೆ ರಜೆ ಮುಗಿದ ಬಳಿಕ ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.

ನೀಟ್ ಅಭ್ಯರ್ಥಿಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅರವಿಂದ ದಾತಾರ್, '2022-23ನೇ ಸಾಲಿನ ನೀಟ್-ಪಿಜಿ ಪ್ರವೇಶವು ಶೀಘ್ರವೇ ಆರಂಭವಾಗಲಿದೆ. ಆದರೆ ಸರ್ಕಾರ ನಿಗದಿಪಡಿಸಿದ ಇಡಬ್ಲ್ಯುಎಸ್ಗಳ ವಾರ್ಷಿಕ ₹8 ಲಕ್ಷ ಆದಾಯವನ್ನು ಗುರುತಿಸುವಲ್ಲಿ ಮಾತ್ರವೇ ಸಮಸ್ಯೆಯಿದೆ. ಇದು ನೀಟ್ ಪ್ರವೇಶಕ್ಕೆ ಅನ್ವಯವಾಗಲಿದೆಯೇ' ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.