ಶನಿವಾರ, ಡಿಸೆಂಬರ್ 3, 2022
21 °C

ಸಾಮೂಹಿಕ ಅತ್ಯಾಚಾರ ಪ್ರಕರಣ| ಅಂಡಮಾನ್‌ ನಿಕೋಬಾರ್‌ ಮಾಜಿ ಮುಖ್ಯ ಕಾರ್ಯದರ್ಶಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಪೋರ್ಟ್‌ಬ್ಲೇರ್‌: ಅಂಡಮಾನ್ ಮತ್ತು ನಿಕೋಬಾರ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೇನ್‌ ಅವರನ್ನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. 

ನರೇನ್‌ ಮತ್ತು ಇತರರ ವಿರುದ್ಧ 21 ವರ್ಷದ ಯುವತಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ನರೇನ್‌ ಅವರಿಗೆ ಸ್ಥಳೀಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ತಿರಸ್ಕರಿಸಿದೆ. 

ನರೇನ್‌ ಅವರ ಜಾಮೀನು ಅರ್ಜಿ ತಿರಸ್ಕರಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡುತ್ತಲೇ, ಪೊಲೀಸರ ತಂಡ ನರೇನ್ ತಂಗಿರುವ ಖಾಸಗಿ ರೆಸಾರ್ಟ್‌ಗೆ ತೆರಳಿ ಭಾರಿ ಭದ್ರತೆಯ ನಡುವೆ ಬಂಧಿಸಿ ಕರೆದೊಯ್ಯಿತು. ನಂತರ ಅವರ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. 

ವೈದ್ಯಕೀಯ ಪರೀಕ್ಷೆ ಮುಗಿಸಿ ಆಸ್ಪತ್ರೆಯಿಂದ ಹೊರಬರುತ್ತಿರುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ನರೇನ್‌, ‘ನನ್ನ ಮೇಲಿನ ಆರೋಪ ಸುಳ್ಳು... ಇದೊಂದು ಪಿತೂರಿ... ನಿಮಗೂ ತಿಳಿದಿದೆ. ಎಲ್ಲದ ಬಗ್ಗೆ ನಾನು ನಿಮ್ಮೊಂದಿಗೆ ಮಾತನಾಡುತ್ತೇನೆ’ ಎಂದು ಮಾಧ್ಯಮಗಳಿಗೆ ಹೇಳಿದರು.  

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನರೇನ್ ಅವರನ್ನು ಈವರೆಗೆ ಮೂರು ಬಾರಿ ವಿಚಾರಣೆ ನಡೆಸಿದೆ.

ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ 21 ವರ್ಷದ ಯುವತಿಯನ್ನು ಮುಖ್ಯ ಕಾರ್ಯದರ್ಶಿ ನರೇನ್‌ ಅವರ ಮನೆಗೆ ಕರೆದೊಯ್ದು, ಅಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿದೆ. ಇದರಲ್ಲಿ ನರೇನ್‌ ಮತ್ತು ಅವರ ಸಹೋದ್ಯೋಗಿ ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂಬುದು ಆರೋಪ. ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು