ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಂಕ್‌ ಅವ್ಯವಹಾರ ಪ್ರಕರಣ: ಮಾಜಿ ಕ್ರಿಕೆಟಿಗ ನಮನ್‌ ಓಜಾ ತಂದೆ ಸೆರೆ

Last Updated 7 ಜೂನ್ 2022, 8:23 IST
ಅಕ್ಷರ ಗಾತ್ರ

ಬೇತಲ್‌: 2013ರಲ್ಲಿ ಬೇತಲ್ ಜಿಲ್ಲೆಯಲ್ಲಿ ನಡೆದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗ ನಮನ್ ಓಜಾ ಅವರ ತಂದೆ ವಿ.ಕೆ ಓಜಾ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಮಧ್ಯಪ್ರದೇಶ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ವಿ. ಕೆ. ಓಜಾ ಅವರು 2013 ರಲ್ಲಿ ಬೇತಲ್‌ನ ಜೌಲ್‌ಖೇಡಾದ ‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ಶಾಖೆಯ ಮ್ಯಾನೇಜರ್ ಆಗಿದ್ದರು. ಆಗ ಅವರ ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು.

ಮುಲ್ತಾಯಿ ಪಟ್ಟಣದ ಪೊಲೀಸರು 2014ರಲ್ಲಿ ಸುಮಾರು ₹1.25 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದರು. ತಲೆಮರೆಸಿಕೊಂಡಿದ್ದ ವಿ. ಕೆ. ಓಜಾ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಮುಲ್ತಾಯಿ ಪೊಲೀಸ್ ಠಾಣೆ ಅಧಿಕಾರಿ ಸುನಿಲ್ ಲತಾ ತಿಳಿಸಿದ್ದಾರೆ.

ಪ್ರಕರಣದ ಇತರ ಎಲ್ಲ ಆರೋಪಿಗಳನ್ನು ಮೊದಲೇ ಬಂಧಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ. ಬಂಧನದ ನಂತರ, ವಿ ಕೆ ಓಜಾ ಅವರನ್ನು ಸೋಮವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಪೊಲೀಸರು ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ವಿ.ಕೆ ಓಜಾ ಅವರಿದ್ದ ಶಾಖೆಯಲ್ಲಿ 34 ನಕಲಿ ಖಾತೆಗಳನ್ನು ತೆರೆಯುವ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಸಾಲದ ಮೊತ್ತವನ್ನು ವರ್ಗಾವಣೆ ಮಾಡಲಾಗಿತ್ತು ಎನ್ನಲಾಗಿದ್ದು, ಈ ಬಗ್ಗೆ ಆಗಿನ ಬ್ಯಾಂಕ್ ಮ್ಯಾನೇಜರ್ ರಿತೇಶ್ ಚತುರ್ವೇದಿ ದೂರು ದಾಖಲಿಸಿದ್ದರು. ಜೂನ್ 19, 2014 ರಂದು ಎಫ್‌ಐಆರ್ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT