ತಿರುವನಂತಪುರ: ಕೇರಳದ ಕಾಂಗ್ರೆಸ್ ನಾಯಕ ಪಿ.ಎಸ್. ಪ್ರಶಾಂತ್ ಅವರು ಆಡಳಿತಾರೂಢ ಸಿಪಿಎಂಗೆ ಸೇರ್ಪಡೆಗೊಂಡ ಬೆನ್ನಲ್ಲೇ ಕೇರಳ ಕಾಂಗ್ರೆಸ್ ಪ್ರದೇಶ ಸಮಿತಿಯ (ಕೆಪಿಸಿಸಿ) ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಅನಿಲ್‌ಕುಮಾರ್ ಅವರು ಪಕ್ಷ ತೊರೆದು ಮಂಗಳವಾರ ಸಿಪಿಎಂಗೆ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್‌ನೊಂದಿಗಿನ ತಮ್ಮ 43 ವರ್ಷಗಳ ಸಂಬಂಧವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ ಅನಿಲ್‌ಕುಮಾರ್, ಯಾವುದೇ ಷರತ್ತುಗಳಿಲ್ಲದೇ ಸಿಪಿಎಂಗೆ ಸೇರ್ಪಡೆಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
ಎಐಸಿಸಿಯು ಈಚೆಗೆ ಪಕ್ಷದ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿತ್ತು. ಈ ಬಗ್ಗೆ ಅಸಮಾಧಾನ ಹೊಂದಿದ್ದ ಅನಿಲ್‌ಕುಮಾರ್ ಬಹಿರಂಗವಾಗಿ ಅದನ್ನು ಹೊರಹಾಕಿದ್ದರು. ಇದನ್ನು ಪಕ್ಷವು ಅಶಿಸ್ತು ಎಂದು ಪರಿಗಣಿಸಿ ಅವರನ್ನು ಕೆಲಕಾಲ ಪಕ್ಷದಿಂದ ಅಮಾನತುಗೊಳಿಸಿತ್ತು.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ ಅನಿಲ್‌ಕುಮಾರ್, ಪಕ್ಷಕ್ಕೆ ವಿವರಣೆ ನೀಡಿದ್ದರೂ ಅದು ತಮ್ಮ ಅಮಾನತನ್ನು ರದ್ದುಗೊಳಿಸಿಲ್ಲ. ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ತಾಲಿಬಾನ್ ಮಾದರಿಯಲ್ಲಿ ಪಕ್ಷದ ರಾಜ್ಯ ಘಟಕದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ ಎಂದು ದೂರಿ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ಸುಧಾಕರನ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅನಿಲ್ ಅವರನ್ನು ಉಚ್ಚಾಟಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.