ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನಿಖೆ ಬುಡಮೇಲು ಮಾಡಲು ಯತ್ನ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ದೇಶಮುಖ್‌ ವಕೀಲನ ಬಂಧನ

Last Updated 2 ಸೆಪ್ಟೆಂಬರ್ 2021, 6:53 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರ ವಕೀಲ ಆನಂದ್‌ ಡಾಗಾ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

‘ದೇಶಮುಖ್‌ ಅವರ ವಿರುದ್ಧ ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಕೈಗೊಂಡಿದ್ದ ತನಿಖೆಯನ್ನು ಬುಡಮೇಲು ಮಾಡಲು ಯತ್ನಿಸಿದ ಆರೋಪದ ಮೇಲೆ ವಕೀಲ ಡಾಗಾ ಅವರನ್ನು ಮುಂಬೈನಲ್ಲಿ ಬಂಧಿಸಿ, ನವದೆಹಲಿಯಲ್ಲಿರುವ ಸಿಬಿಐ ಕಚೇರಿಗೆ ಕರೆತರಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಡಾಗಾ ಅವರಿಂದ ಲಂಚ ಪಡೆದ ಆರೋಪದ ಮೇಲೆ ಸಿಬಿಐ ಸಬ್‌ಇನ್ಸ್‌ಪೆಕ್ಟರ್‌ ಅಭಿಷೇಕ್ ತಿವಾರಿ ಎಂಬುವವನ್ನು ಬುಧವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನೂ ಕೋರ್ಟ್‌ಗೆ ಹಾಜರುಪಡಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ತನಿಖೆಯ ಪ್ರಾಥಮಿಕ ವರದಿ ಪ್ರಕಾರ ದೇಶಮುಖ್‌ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂಬಂಥ ಮಾಹಿತಿ ಶನಿವಾರ ರಾತ್ರಿ ಸೋರಿಕೆಯಾಗಿತ್ತು. ಇದು ಸಿಬಿಐಗೆ ಸಾಕಷ್ಟು ಮುಜುಗರವನ್ನುಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಸಿಬಿಐ ಈಗ ದೇಶಮುಖ್‌ ಅವರ ವಕೀಲ ಡಾಗಾ ಅವರನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT