ಮಂಗಳವಾರ, ಮಾರ್ಚ್ 2, 2021
21 °C

ಕೇರಳ: ಸಿಪಿಎಂ ಹಿರಿಯ ನಾಯಕ ಬಿ. ರಾಘವನ್‌ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಸಿಪಿಐ(ಎಂ)ನ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಬಿ. ರಾಘವನ್‌(69) ಅವರು ಕೋವಿಡ್‌ನಿಂದಾಗಿ ಮಂಗಳವಾರ ನಿಧನರಾದರು.

‘ಕೊಲ್ಲಂನ ಪರಿಪಲ್ಲಿ ಮೆಡಿಕಲ್‌ ಕಾಲೇಜಿನಲ್ಲಿ ರಾಘವನ್‌ ಮತ್ತು ಅವರ ಕುಟುಂಬದ ಸದಸ್ಯರು ಕೋವಿಡ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾಘವನ್‌ ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಸರ್ಕಾರಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾಘವನ್‌ ಅವರು ಮಂಗಳವಾರ ಬೆಳಿಗ್ಗೆ 4.45ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಮೂಲಗಳು ತಿಳಿಸಿವೆ.

1987ರಲ್ಲಿ ನೆಡವತ್ತೂರು ಕ್ಷೇತ್ರದಿಂದ ಮೊದಲ ಬಾರಿ ಕೇರಳ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಳಿಕ 1991ರಲ್ಲಿ ಮತ್ತೆ ವಿಜಯ ಸಾಧಿಸಿದರು. ಆದರೆ 1996 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದರು. 2006ರಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು