ಭಾನುವಾರ, ನವೆಂಬರ್ 29, 2020
19 °C

ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ‌ಸುಪ್ರೀಂಗೆ ಕಮಲ್‌ನಾಥ್ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ತಮಗಿರುವ ‘ಸ್ಟಾರ್ ಪ್ರಚಾರಕ‌’ ಸ್ಥಾನಮಾನ ತೆಗೆಯುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಜ್ಯ ವಿಧಾನಸಭೆಯ 28 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪ ಚುನಾವಣೆಯ ಪ್ರಚಾರದ ವೇಳೆ ಕಮಲ್‌ನಾಥ್ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಚುನಾವಣಾ ಆಯೋಗ ಈ ಕ್ರಮಕೈಗೊಂಡಿತ್ತು.

ಹಿರಿಯ ವಕೀಲ, ರಾಜ್ಯಸಭೆ ಸದಸ್ಯ ವಿವೇಕ್ ತಂಖಾ ಅವರು, ವಿವಿಧ ಕಾರಣಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್‌ನಲ್ಲಿ ಆಯೋಗದ ಆದೇಶ ಪ್ರಶ್ನಿಸಿದ್ದು, ತುರ್ತಾಗಿ ವಿಚಾರಣೆಗೆ ತೆಗದುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು