ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ: ಏಮ್ಸ್‌ಗೆ ದಾಖಲು

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಬುಧವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರು ಸೋಮವಾರ ಜ್ವರದಿಂದ ಬಳಲಿದ್ದರು. ಜ್ವರದಿಂದ ಚೇತರಿಸಿಕೊಂಡರೂ ಅತಿಯಾದ ಆಯಾಸ ಕಾಡಿತ್ತು ಹಾಗೂ ದ್ರವ ರೂಪದ ಆಹಾರವನ್ನಷ್ಟೇ ತೆಗೆದುಕೊಳ್ಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ವರ್ಷ ಏಪ್ರಿಲ್‌ನಲ್ಲಿ ಮನಮೋಹನ್ ಸಿಂಗ್ ಅವರಿಗೆ ಕೋವಿಡ್ ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.