ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ ಹಾಕಿಸಿಕೊಂಡ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Last Updated 4 ಮಾರ್ಚ್ 2021, 8:21 IST
ಅಕ್ಷರ ಗಾತ್ರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನವದಹೆಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.

ಈ ವೇಳೆಯಲ್ಲಿ ಮನಮೋಹನ್ ಸಿಂಗ್ ಧರ್ಮಪತ್ನಿ ಗುರ್ಷರನ್ ಕೌರ್ ಸಹ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡರು.

ಭಾರತದ ಮಾಜಿ ಪ್ರಧಾನಿ ಹಾಗೂ ಪತ್ನಿ, ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿರುವ ಭಾರತ್ ಬಯೋಟೆಕ್‌ನ 'ಕೋವ್ಯಾಕ್ಸಿನ್' ಕೋವಿಡ್ ಲಸಿಕೆಯನ್ನು ಪಡೆದರು.

88 ವರ್ಷದ ಮನಮೋಹನ್ ಸಿಂಗ್ ಅರ್ಧ ತಾಸಿನಷ್ಟು ಹೊತ್ತು ಆಸ್ಪತ್ರೆಯಲ್ಲಿ ಉಳಿದುಕೊಂಡರು. ಅಲ್ಲದೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಬಳಿಕ ಮನೆಗೆ ಹಿಂತಿರುಗಿದರು ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಲಸಿಕೆ ಹಾಕಿಸಿಕೊಂಡ ವಿತ್ತ ಸಚಿವೆ...
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಹಾಸಿಕೊಂಡರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ನಿರ್ಮಲಾ ಸೀತಾರಾಮನ್, 'ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮೊದಲ ಡೋಸ್ ಹಾಕಿಸಿಕೊಂಡೆ. ಸಿಸ್ಟರ್ ರಮ್ಯಾ ಪಿಸಿ ಅವರ ಕಾಳಜಿ ಹಾಗೂ ವೃತ್ತಿಪರತೆಗಾಗಿ ಧನ್ಯವಾದಗಳು. ಅಭಿವೃದ್ಧಿ ತ್ವರಿತ ಗತಿ ಹಾಗೂ ಕೈಗೆಟುಕುವಂತಹ ಭಾರತದಲ್ಲಿರುವುದು ನನ್ನ ಅದೃಷ್ಟ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT