ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆಲಂಗಾಣ: ಶಾಸಕ ಸ್ಥಾನಕ್ಕೆ ರಾಜೇಂದರ್ ರಾಜೀನಾಮೆ– ಜೂ.14ಕ್ಕೆ ಬಿಜೆಪಿಗೆ ಸೇರ್ಪಡೆ

Last Updated 12 ಜೂನ್ 2021, 10:44 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲಂಗಾಣದ ಮಾಜಿ ಆರೋಗ್ಯ ಸಚಿವ, ಟಿಆರ್‌ಎಸ್‌ನ ಹಿರಿಯ ನಾಯಕ ಎಟೆಲಾ ರಾಜೇಂದರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಕೆಲ ದಿನಗಳು ಮುಂದೆ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವನ್ನೂ ತ್ಯಜಿಸಿದ್ದರು.

ರಾಜೇಂದರ್‌ ಅವರು ಹುಜೂರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.ಅವರು ಜೂ. 14ರಂದು ಬಿಜೆಪಿಗೆ ಸೇರ್ಪಡೆಯಾಗುವರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

‘ನಾನು ಸ್ಪೀಕರ್‌ ಅವರಿಗೆ ನೇರವಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದಿದ್ದೆ. ಆದರೆ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ. ಹಾಗಾಗಿ ನಾನು ರಾಜೀನಾಮೆ ಪತ್ರವನ್ನು ವಿಧಾನಸಭೆಯ ಕಾರ್ಯದರ್ಶಿ ಅವರಿಗೆ ಸಲ್ಲಿಸಿದ್ದೇನೆ’ ಎಂದು ರಾಜೇಂದರ್‌ ತಿಳಿಸಿದರು.

‘ರಾಜೇಂದರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಜೂನ್ 14 ರಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಅವರು ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ’ ಎಂದು ರಾಜೇಂದರ್‌ ಅವರ ನಿಕಟ ಮೂಲಗಳು ತಿಳಿಸಿವೆ. ಇತರೆ ಟಿಆರ್‌ಎಸ್‌ ನಾಯಕರು ಕೂಡ ಬಿಜೆ‍‍ಪಿಗೆ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ರಾಜೇಂದರ್‌ ಅವರ ಕುಟುಂಬದ ಸದಸ್ಯರ ಒಡೆತನದ ಸಂಸ್ಥೆಗಳು, ಸರ್ಕಾರಿ ಜಮೀನುಗಳನ್ನು ಕಬಳಿಸಿವೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಸಂಪುಟದಿಂದ ಕೈಬಿಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT