ಭೋಪಾಲ್: ಹಿರಿಯ ಸಮಾಜವಾದಿ ನಾಯಕ ಹಾಗೂ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಅವರ ಅಂತ್ಯಕ್ರಿಯೆ ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ ಅವರ ಪೂರ್ವಜರ ಗ್ರಾಮ ಅಂಖ್‌ಮವುದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು.
ಯಾದವ್ ಅವರ ಪುತ್ರ ಶಂತನು ಬುಂದೇಲಾ ಹಾಗೂ ಪುತ್ರಿ ಸುಭಾಷಿಣಿ ಅವರು ಅಂತ್ಯಕ್ರಿಯೆಯ ವಿಧಿ– ವಿಧಾನಗಳನ್ನು ನೆರವೇರಿಸಿದರು. ಶರದ್ ಯಾದವ್ ಗುರುಗ್ರಾಮದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.
ಶರದ್ ಯಾದವ್ ಅವರ ಪಾರ್ಥಿವ ಶರೀರವನ್ನು ದೆಹಲಿಯಿಂದ ಭೋಪಾಲ್‌ಗೆ ವಿಮಾನದ ಮೂಲಕ ತರಲಾಯಿತು. ಅಲ್ಲಿಂದ ರಸ್ತೆ ಮಾರ್ಗದಲ್ಲಿ ಅಂಖ್‌ಮವು ಗ್ರಾಮಕ್ಕೆ ಒಯ್ಯಲಾಯಿತು. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸೇರಿದಂತೆ ಇತರರು ಅಂತಿಮ ದರ್ಶನ ಮಾಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.