ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಿ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದ ಅಮಿತಾಭ್ ಠಾಕೂರ್‌ಗೆ ಗೃಹ ಬಂಧನ: ಆರೋಪ

Last Updated 21 ಆಗಸ್ಟ್ 2021, 13:50 IST
ಅಕ್ಷರ ಗಾತ್ರ

ಲಖನೌ: ತಮ್ಮನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಉತ್ತರ ಪ್ರದೇಶದ ಮಾಜಿ ಐಪಿಎಸ್‌ ಅಧಿಕಾರಿ ಅಮಿತಾಭ್ ಠಾಕೂರ್ ಹೇಳಿದ್ದಾರೆ.

ಗೋರಖ್‌ಪುರಕ್ಕೆ ಭೇಟಿ ನೀಡಿ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ ನಡೆಸಲು ಅವರು ಮುಂದಾಗಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ಸ್ಪರ್ಧಿಸುವುದಾಗಿ ಠಾಕೂರ್ ಘೋಷಿಸಿದ್ದರು.

ಬೆಳಿಗ್ಗೆ ಗೋರಖ್‌ಪುರಕ್ಕೆ ಹೊರಟಿದ್ದ ಠಾಕೂರ್ ಅವರನ್ನು ತಡೆದು ವಾಪಸ್ ಗೋಮತಿ ನಗರ ಪ್ರದೇಶದಲ್ಲಿರುವ ಅವರ ಮನೆಗೆ ಕಳುಹಿಸಲಾಗಿದೆ. ಅವರ ನಿವಾಸದ ಸುತ್ತಲೂ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಠಾಕೂರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿಲ್ಲ. ಶಾಂತಿ ಭಂಗ ಮತ್ತು ಅವರ ಭದ್ರತೆಗೆ ಆತಂಕ ಇರುವುದರಿಂದ ಗೋರಖ್‌ಪುರಕ್ಕೆ ತೆರಳದಂತೆ ತಡೆಯಲಾಗಿದೆಯಷ್ಟೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದಿತ್ಯನಾಥ್ ಅವರ ದಮನಕಾರಿ ಮತ್ತು ಪ್ರಜಾಪ್ರಭುತ್ವವಲ್ಲದ ನೀತಿಗಳನ್ನು ವಿರೋಧಿಸಿ ಯಾವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರೂ ಅವರ ವಿರುದ್ಧ ಸ್ಪರ್ಧಿಸುವುದಾಗಿ ಠಾಕೂರ್ ಹೇಳಿದ್ದರು.

ಕೇಂದ್ರ ಗೃಹ ಸಚಿವಾಲಯವು ಠಾಕೂರ್ ಅವರಿಗೆ ಮಾರ್ಚ್ 23ರಂದು ಕಡ್ಡಾಯ ನಿವೃತ್ತಿ ಘೋಷಿಸಿತ್ತು. ಸಾರ್ವಜನಿಕ ಹಿತಾಸಕ್ತಿಗಾಗಿ ಠಾಕೂರ್ ಅವರಿಗೆ ಕಡ್ಡಾಯ ನಿವೃತ್ತಿ ನೀಡುತ್ತಿರುವುದಾಗಿ ಮಾರ್ಚ್‌ 23ರಂದು ಘೋಷಿಸಲಾಗಿತ್ತು. ಸೇವೆಯ ಉಳಿದ ಅವಧಿಯಲ್ಲಿ ಕಾರ್ಯನಿರ್ವಹಿಸಲು ಅವರು ‘ಫಿಟ್’ ಆಗಿಲ್ಲ ಎಂದೂ ಕೇಂದ್ರ ಗೃಹ ಸಚಿವಾಲಯ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT