ಶನಿವಾರ, ಜೂನ್ 25, 2022
24 °C

ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಉತ್ತರಾಖಂಡದ ಮಾಜಿ ಸಚಿವ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ (59) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲ್‌ದ್ವಾನಿ ನಗರದ ಭಗತ್‌ ಸಿಂಗ್ ಕಾಲೊನಿಯಲ್ಲಿ ನೀರಿನ ಟ್ಯಾಂಕ್‌ ಏರಿ ತಮಗೆ ತಾವೇ ಗುಂಡಿಕ್ಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಮ್ಮಗಳಿಗೆ ಕಿರುಕುಳ ನೀಡಿದ ಬಗ್ಗೆ ರಾಜೇಂದ್ರ ಬಹುಗುಣ ಅವರ ಸೊಸೆ ನೀಡಿದ್ದ ದೂರಿನ ಆಧಾರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ನೈನಿತಾಲ್‌ನ ಎಸ್‌ಎಸ್‌ಪಿ ಪಂಕಜ್ ಭಟ್ ತಿಳಿಸಿದ್ದಾರೆ.

ಸದ್ಯ ಬಹುಗುಣ ಅವರ ಪುತ್ರ ತಮ್ಮ ಪತ್ನಿ ವಿರುದ್ಧ ಪೊಲಿಸರಿಗೆ ದೂರು ನೀಡಿದ್ದು, ಆಕೆ ತಂದೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂದು ಆರೋಪಿಸಿದ್ದಾರೆ.

ರಾಜೇಂದ್ರ ಬಹುಗುಣ ಅವರು 2004–05 ರಲ್ಲಿ ಸಚಿವರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು