ಶನಿವಾರ, ಮಾರ್ಚ್ 25, 2023
30 °C

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಕಡಿತದಿಂದ ಜನರಿಗೆ ನಿರಾಳ: ಅಮಿತ್ ಶಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿಮೆ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿರುವ ಪ್ರಮುಖ ನಿರ್ಧಾರವಾಗಿದೆ. ಈ ಕ್ರಮ ಸಾಮಾನ್ಯ ಜನರಿಗೆ ಸಮಾಧಾನ ತರುವ ಜೊತೆಗೆ ಹಣದುಬ್ಬರವನ್ನೂ ಕಡಿಮೆ ಮಾಡಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುರುವಾರ ಇಲ್ಲಿ ಹೇಳಿದರು.

‘ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಎಕ್ಸೈಸ್‌ ಸುಂಕವನ್ನು ಕ್ರಮವಾಗಿ ₹ 5 ಹಾಗೂ ₹ 10 ಕಡಿಮೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಸಂದರ್ಭದಲ್ಲಿ ಜನರಿಗೆ ಸಮಾಧಾನ ತಂದಿದ್ದಾರೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಬಿಜೆಪಿ ಆಡಳಿತ ಇರುವ ರಾಜ್ಯಗಳು ಸಹ ಇಂಧನ ದರಗಳಲ್ಲಿ ಮತ್ತಷ್ಟೂ ಕಡಿತಗೊಳಿಸುವ ಮೂಲಕ ಉತ್ತಮ ಕಾರ್ಯ ಮಾಡಿವೆ’ ಎಂದಿದ್ದಾರೆ.

‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಹೆಚ್ಚಾಗುತ್ತಿದ್ದರೂ, ತೈಲೋತ್ಪನ್ನಗಳ ಮೇಲಿನ ಎಕ್ಸೈಸ್‌ ಸುಂಕವನ್ನು ಕಡಿಮೆ ಮಾಡುವಂಥ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಕ್ಕಾಗಿ ನಾನು ಮೋದಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು