ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ ಸಿಸೋಡಿಯಾ

Last Updated 3 ಮಾರ್ಚ್ 2023, 15:51 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಬಂಧಿಸಲಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರು ಜಾಮೀನು ಕೋರಿ, ಶುಕ್ರವಾರ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

‘ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್‌ ಅವರು ಈ ಅರ್ಜಿಯ ವಿಚಾರಣೆಯನ್ನು ಶನಿವಾರ ನಡೆಸಲಿದ್ದಾರೆ’ ಎಂದು ವಕೀಲ ರಿಷಿಕೇಶ್‌ ಹೇಳಿದರು.

ಸಿಸೋಡಿಯಾ ಅವರನ್ನು ಫೆಬ್ರುವರಿ 27ರಂದು (ಸೋಮವಾರ) ಐದು ದಿನಗಳ ವರೆಗೆ ಸಿಬಿಐ ವಶಕ್ಕೆ ನೀಡಲಾಗಿತ್ತು. ಈ ಅವಧಿಯು ಶನಿವಾರ ಅಂತ್ಯವಾಗಲಿದೆ. ಸಿಸೋಡಿಯಾ ಅವರನ್ನು ಅಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT