ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌ ಸಂಘರ್ಷ | ಸಮಸ್ಯೆಗಳಿಗೆ ಚೀನಾ ಪರಿಹಾರ ಕಂಡುಕೊಳ್ಳುವ ನಿರೀಕ್ಷೆ ಇದೆ: ಭಾರತ

Last Updated 15 ಅಕ್ಟೋಬರ್ 2021, 2:02 IST
ಅಕ್ಷರ ಗಾತ್ರ

ನವದೆಹಲಿ: ‘ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯ (ಎಲ್‌ಎಸಿ) ಬಳಿ ಉಂಟಾಗಿರುವ ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಭಾರತ– ಚೀನಾ ಮಿಲಿಟರಿ ಮಾತುಕತೆ ವಿಫಲವಾದ ಬೆನ್ನಲ್ಲೇ ಉಳಿದ ಎಲ್ಲಾ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲು ಚೀನಾ ಕೆಲಸ ಮಾಡುವ ನಿರೀಕ್ಷೆ ಇದೆ’ ಎಂದು ಭಾರತ ವಿಶ್ವಾಸ ವ್ಯಕ್ತಪಡಿಸಿದೆ.

‘13ನೇ ಸುತ್ತಿನ ಮಿಲಿಟರಿ ಮಾತುಕತೆಯ ಸಂದರ್ಭದಲ್ಲಿ ಗಡಿ ವಿವಾದ ಬಗೆಹರಿಸಿಕೊಳ್ಳಲು ಭಾರತ ರಚನಾತ್ಮಕ ಸಲಹೆಗಳನ್ನು ಮುಂದಿಟ್ಟಿತ್ತು. ಆದರೆ, ಚೀನಾ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

‘ದ್ವಿಪಕ್ಷೀಯ ಒಪ್ಪಂದಗಳು ಮತ್ತು ಶಿಷ್ಟಾಚಾರಗಳನ್ನು ಸಂಪೂರ್ಣವಾಗಿ ಅನುಸರಿಸುವ ಮೂಲಕ ಚೀನಾವು ಪೂರ್ವ ಲಡಾಖ್‌ನಲ್ಲಿ ಉದ್ಭವಿಸಿರುವ ಬಿಕ್ಕಟ್ಟುಗಳನ್ನು ಶೀಘ್ರ ಪರಿಹರಿಸಲಿದೆ ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಬಾಗ್ಚಿ ಹೇಳಿದ್ದಾರೆ.

ಗಾಲ್ವಾನ್‌ ಕಣಿವೆಯಲ್ಲಿ ಉಂಟಾಗಿದ್ದ ಸಂಘರ್ಷದ ನಂತರ ಭಾರತ –ಚೀನಾ ಉಭಯ ರಾಷ್ಟ್ರಗಳ ನಡುವೆ ಅ.9ರಂದು 13ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿತ್ತು. ಪೂರ್ವ ಲಡಾಖ್‌ನ ನೈಜ ನಿಯಂತ್ರಣ ರೇಖೆಯ (ಎಲ್‌ಎಸಿ) ಚೀನಾದ ಬದಿಯ ಚುಶುಲ್-ಮೊಲ್ಡೊ ಗಡಿಯಲ್ಲಿ ಈ ಮಾತುಕತೆ ನಡೆದಿತ್ತು. ಸುಮಾರು ಎಂಟೂವರೆ ಗಂಟೆಗಳ ಕಾಲ ನಡೆದ ಸಭೆ ಅಂತಿಮವಾಗಿ ವಿಫಲವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT