ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೆಹಲಿಯಲ್ಲಿ ಶುಕ್ರವಾರ 25,000ಹೊಸ ಪ್ರಕರಣ ಸಾಧ್ಯತೆ:‌ ಸತ್ಯೇಂದರ್ ಜೈನ್

Last Updated 14 ಜನವರಿ 2022, 8:18 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್‌ ರೋಗಿಗಳಿಗಾಗಿ ವ್ಯವಸ್ಥೆ ಮಾಡಲಾಗಿರುವ ಶೇ85 ಕ್ಕಿಂತಲೂ ಹೆಚ್ಚು ಹಾಸಿಗೆಗಳು ಖಾಲಿ ಇವೆ. ಇಂದು (ಶುಕ್ರವಾರ, ಜ.14)25,000ಹೊಸ ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್‌ ಜೈನ್‌ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಜೈನ್‌, 'ಕಳೆದ ರಾತ್ರಿ ದೆಹಲಿಯಲ್ಲಿ ಕೋವಿಡ್‌ ದೃಢಪಟ್ಟ 28,867 ಹೊಸ ಪ್ರಕರಣಗಳು ಮತ್ತು31 ಸಾವಿನ ಪ್ರಕರಣಗಳು ವರದಿಯಾಗಿವೆ.2,424 ಸೋಂಕಿತರು ಆಸ್ಪತ್ರೆ ಸೇರಿದ್ದಾರೆ.13,000ಕ್ಕೂ ಹೆಚ್ಚು ಹಾಸಿಗೆಗಳು ಖಾಲಿ ಇವೆ.ಸದ್ಯ ಆಸ್ಪತ್ರೆಗಳಲ್ಲಿಶೇ15 ರಷ್ಟು ಹಾಸಿಗೆಗಳು ಮಾತ್ರವೇ ಭರ್ತಿಯಾಗಿವೆ.ನಗರದಲ್ಲಿ ಇಂದು25,000 ಪ್ರಕರಣಗಳು ವರದಿಯಾಗಬಹುದು ಎಂದು ನಿರೀಕ್ಷಿಸಿದ್ದೇವೆ' ಎಂದು ತಿಳಿಸಿದ್ದಾರೆ.

'ಸೋಂಕಿತರು ಆಸ್ಪತ್ರೆಗೆ ದಾಖಲಾಗುವುದು ನಿಂತಿದೆ. ಇದು ಒಳ್ಳೆಯದು. ಸೋಂಕು ದೃಢ ಪ್ರಮಾಣ ಬದಲಾಗುತ್ತಲೇ ಇರುತ್ತದೆ. ಆದರೆ, ಆಸ್ಪತ್ರೆಗೆ ದಾಖಲಾಗುವುದು ಹೆಚ್ಚಾದರೆ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ' ಎಂದಿದ್ದಾರೆ.

ಮುಂದುವರಿದು, 'ಕೋವಿಡ್‌ನಿಂದ ಮೃತಪಟ್ಟವರಲ್ಲಿ ಶೇ 75 ರೋಗಿಗಳು ಲಸಿಕೆ ಪಡೆದುಕೊಳ್ಳದೇ ಇದ್ದವರು. ಹಾಗೆಯೇ ತೀವ್ರ ಅನಾರೋಗ್ಯವಿದ್ದ ಶೇ 90 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ, ಸಾವಿಗೀಡಾದ 7 ಮಂದಿ ಹದಿಹರೆಯದವರು ಸಹ ದೀರ್ಘಕಾಲದಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದರು' ಎಂದು ಮಾಹಿತಿ ನೀಡಿದ್ದಾರೆ.

ವಾರಾಂತ್ಯದ ಕರ್ಫ್ಯೂಗೆ ಮುಂಚಿತವಾಗಿ ಯಾವುದೇ ಹೊಸ ನಿರ್ಬಂಧಗಳನ್ನು ವಿಧಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದೂಜೈನ್ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT