ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣ ನಿರ್ಮಾಣ ಚುರುಕುಗೊಳಿಸಲು ಕೇಂದ್ರಕ್ಕೆ ತೆಲಂಗಾಣ ಸಿ.ಎಂ ಮನವಿ

Last Updated 12 ಡಿಸೆಂಬರ್ 2020, 12:20 IST
ಅಕ್ಷರ ಗಾತ್ರ

ನವದೆಹಲಿ: ತೆಲಂಗಾಣದಲ್ಲಿ ನಿಜಾಮಾಬಾದ್‌ ಸೇರಿದಂತೆ ಉದ್ದೇಶಿತ ಆರು ನೂತನ ವಿಮಾನ ನಿಲ್ದಾಣಗಳ ನಿರ್ಮಾಣ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ನಾಗರಿಕ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಬಂದಿರುವ ತೆಲಂಗಾಣದ ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನೂ ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಅಧಿಕಾರಿ ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಕಾರ್ಯಕ್ರಮಗಳು ಇಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT