ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹೊಸ ಅಲೆಯ ಸೂಚಕವಲ್ಲ: ತಜ್ಞರು

Last Updated 3 ಮೇ 2022, 14:20 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಕೆಲವು ವಾರಗಳಿಂದ ನವದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾಗಿರುವುದು ಸಾಂಕ್ರಾಮಿಕದ ಹೊಸ ಅಲೆಯ ಸೂಚಕವಲ್ಲ. ಆದರೆ, ಜನರು ನಿರ್ಲಕ್ಷ್ಯ ವಹಿಸಬಾರದು. ಸಾಂಕ್ರಾಮಿಕ ಹರಡುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ತಜ್ಞರು ಹೇಳಿದ್ದಾರೆ.

ಪಾಸಿಟಿವಿಟಿ ದರ ಸ್ಥಿರವಾಗಿದೆ. ಒಂದೇ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವುದನ್ನು ಇದು ಸೂಚಿಸುತ್ತದೆ. ಹೊಸ ಅಲೆ ಕಾಣಿಸಿಲ್ಲ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಚಂದ್ರಕಾಂತ್ ಲಹರಿಯಾ ತಿಳಿಸಿದ್ದಾರೆ.

ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲಿಯೂ ಸೂಕ್ಷ್ಮ ಬದಲಾವಣೆ ಕಾಣಿಸಿದೆ. ಇದರಿಂದ ಕೋವಿಡ್ ಹೊಸ ಅಲೆ ಇಲ್ಲ ಎಂಬುದು ಸಾಬೀತಾಗಿದೆ. ಕೇವಲ ಸಂಖ್ಯೆಗಳ ಆಧಾರದಲ್ಲಿ ಏನೂ ಹೇಳಲಾಗದು. ಹೆಚ್ಚು ಪರೀಕ್ಷೆ ನಡೆಸಿದಾಗ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತವೆ ಎಂದು ಅವರು ಹೇಳಿದ್ದಾರೆ.

‘ಪಾಸಿಟಿವಿಟಿ ದರ ಮತ್ತು ಪ್ರಕರಣಗಳ ಸಂಖ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಮರಣ ಪ್ರಮಾಣವೇ ಮುಖ್ಯ ಮಾನದಂಡವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಜನರು ಒಳಾಂಗಣದಲ್ಲಿ ಹಾಗೂ ಹೊರಾಂಗಣದಲ್ಲಿ ಮಾಸ್ಕ್ ಧರಿಸುವುದು ಉತ್ತಮ. ಲಸಿಕೆ ಪಡೆದುಕೊಳ್ಳಬೇಕು. ಆರೋಗ್ಯ ಸಮಸ್ಯೆ ಇರುವವರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

‘ವೈರಸ್ ಇನ್ನೂ ಇದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಸರ್ಕಾರಮಾಸ್ಕ್ ಕಡ್ಡಾಯ ಮಾಡುವ ಬದಲು, ಜನ ತಾವಾಗಿಯೇ ಧರಿಸಬೇಕು’ ಎಂದು ಅವರು ಹೇಳಿದ್ದಾರೆ.

‘ಪಾಸಿಟಿವಿಟಿ ದರ ಹೆಚ್ಚಾಗುತ್ತಾ ಇಲ್ಲ. ಹೊಸ ಅಲೆ ಉದ್ಭವಿಸಲಿದೆ ಎಂದು ಈಗಲೇ ಹೇಳಲಾಗದು. ಆದರೆ, ಸೋಂಕು ಹರಡುವಿಕೆ ತಡೆಯಲು, ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆಯಾಗದಂತೆ ಈಗಲೇ ಕ್ರಮ ಕೈಗೊಳ್ಳಬೇಕು’ ಎಂದು ಭಾರತೀಯ ವೈದ್ಯಕೀಯ ಸಮಿತಿಯ ರಾಷ್ಟ್ರೀಯ ಕಾರ್ಯಪಡೆಯ ಸಹ ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT