ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮೂಹಿಕ ನಾಶ ಶಸ್ತ್ರಾಸ್ತ್ರ’ ಮಸೂದೆ ಮಂಡನೆ

Last Updated 5 ಏಪ್ರಿಲ್ 2022, 20:17 IST
ಅಕ್ಷರ ಗಾತ್ರ

ನವದೆಹಲಿ: ‘ಸಾಮೂಹಿಕ ನಾಶ ಶಸ್ತ್ರಾಸ್ತ್ರಗಳು ಹಾಗೂ ಅವುಗಳ ವಿತರಣಾ ವ್ಯವಸ್ಥೆಗಳ (ಕಾನೂನುಬಾಹಿರ ಚಟುವಟಿಕೆಗಳ ನಿಷೇಧ) ಕಾಯ್ದೆ’ ತಿದ್ದುಪಡಿಗೆ ಸಂಬಂಧಿಸಿದ ಮಸೂದೆಯನ್ನು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಿದರು.

ಉಗ್ರರಿಗೆ ಹಣ ಪೂರೈಸುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಕಾರ್ಯಪಡೆ (ಎಫ್‌ಎಟಿಎಫ್‌) ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಿಫಾರಸುಗಳಿಗೆ ಅನುಗುಣವಾಗಿ ಈ ಮಸೂದೆಯನ್ನು ಮಂಡಿಸಲಾಗಿದೆ.

2005ರಲ್ಲಿಯೇ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಸಾಮೂಹಿಕ ನಾಶ ಶಸ್ತ್ರಾಸ್ತ್ರಗಳ ಪ್ರಸರಣಕ್ಕೆ ಹಣಕಾಸು ನೆರವು ನೀಡುವುದನ್ನು ನಿಷೇಧಿಸಲು ಈ ಕಾಯ್ದೆಯಡಿ ಅವಕಾಶ ಇರಲಿಲ್ಲ. ತಿದ್ದುಪಡಿ ಮಸೂದೆಯು ಈ ಅಂಶಗಳನ್ನು ಒಳಗೊಂಡಿದೆ.

ಈ ಶಸ್ತ್ರಾಸ್ತ್ರಗಳ ತಯಾರಿಕೆಗೆ ಬಳಸಲಾಗುವ ಸಾಮಗ್ರಿಗಳನ್ನು ಭಾರತದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುವ ವ್ಯವಹಾರದಲ್ಲಿ ಪಶ್ಚಿಮ ಏಷ್ಯಾ ಹಾಗೂ ಆಫ್ರಿಕಾದಲ್ಲಿರುವ ಕೆಲ ಸಂಸ್ಥೆಗಳು ನಿರತವಾಗಿವೆ. ಇಂತಹ ಸಂಸ್ಥೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT