ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ ಕುರಿತಾದ ರಮೇಶ್ ಕುಮಾರ್‌ ಹೇಳಿಕೆ ಅತ್ಯಂತ ದುರದೃಷ್ಟಕರ: ರೇಖಾ ಶರ್ಮಾ

Last Updated 17 ಡಿಸೆಂಬರ್ 2021, 6:54 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಕುರಿತಾಗಿ ಕರ್ನಾಟಕ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಅವರು ನೀಡಿರುವ ಹೇಳಿಕೆ ಅತ್ಯಂತ ದುರದೃಷ್ಟಕರ ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಸ್ತ್ರೀ -ದ್ವೇಷಿಗಳು ಮತ್ತು ಮಹಿಳೆಯರ ಬಗ್ಗೆ ಅಸಹನೀಯ ಮನಸ್ಥಿತಿ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳು ನಮ್ಮಲ್ಲಿ ಇನ್ನೂ ಇರುವುದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ’ ಎಂದಿದ್ದಾರೆ.

‘ಇದು ನಿಜಕ್ಕೂ ಅಸಹ್ಯಕರ ಸಂಗತಿ. ಅವರು ಅಸೆಂಬ್ಲಿಯಲ್ಲಿ ಕುಳಿತು ಈ ರೀತಿ ಮಾತನಾಡುತ್ತಿದ್ದರೆ ಅವರು ತಮ್ಮ ಜೀವನದಲ್ಲಿ ಮಹಿಳೆಯರೊಂದಿಗೆ ಹೇಗೆ ವರ್ತಿಸುತ್ತಾರೆ’ ಎಂದು ರೇಖಾ ಶರ್ಮಾ ಪ್ರಶ್ನಿಸಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಅತ್ಯಾಚಾರದ ಕುರಿತು ಮಾತನಾಡಿದ್ದ ರಮೇಶ್‌ ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟೆಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಅಂದರೆ, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ) ಎಂದು ಹೇಳಿದ್ದರು.

ರಮೇಶ್‌ ಕುಮಾರ್ ನೀಡಿದ್ದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿತ್ತು. ಆ ಹಿನ್ನೆಲೆಯಲ್ಲಿ ಅವರು ಗುರುವಾರ ರಾತ್ರಿ ಟ್ವೀಟ್‌ ಮಾಡುವ ಮೂಲಕ ಕ್ಷಮೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT