ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಬೆಂಕಿ ಅವಘಡ: ಪ್ರಾಣ ಹಾನಿಯಿಂದ ಅತೀವ ದುಃಖವಾಗಿದೆ – ಪ್ರಧಾನಿ ಮೋದಿ

Last Updated 14 ಮೇ 2022, 0:59 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 27 ಜನರು ಸಾವಿಗೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

‘ದೆಹಲಿಯ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ಅತೀವ ಬೇಸರವಾಗಿದೆ. ದುಃಖಿತ ಕುಟುಂಬಗಳ ಜತೆ ನಾವಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ’ ಎಂಬುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡುವುದಾಗಿ ಅವರು ತಿಳಿಸಿದ್ದಾರೆ.

ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೊ ನಿಲ್ದಾಣ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ದುರಂತದಲ್ಲಿ 27 ಮಂದಿ ಮೃತಪಟ್ಟಿದ್ದಾರೆ. 50 ಮಂದಿಯನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT